ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪರಿಸರ ದಿನಾಚರಣೆ ನಿತಂರವಾಗಿರಲಿ : ಎಂ. ಸುಧೀರ

ಬಳ್ಳಾರಿ / ಕಂಪ್ಲಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ B C ಟ್ರಸ್ಟ್ ವತಿಯಿಂದ ಕೊಟ್ಟಾಲ್ ಗ್ರಾಮದ ಶ್ರೀ ಪಾಂಡುರಂಗ ದೇವಸ್ಥಾನ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪರಿಸರ ಜಾಗೃತಿ ಬಗ್ಗೆ ಮಾಹಿತಿ ಮತ್ತು ಗಿಡಗಳ ನಾಟಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕಂಪ್ಲಿ ಪುರಸಭೆ ಮಾಜಿ ಅಧ್ಯಕ್ಷರಾದ ಎಂ. ಸುಧೀರ ಅವರು ಭಾಗವಹಿಸಿ ಮಾನವನ ದುರಾಸೆಯಿಂದ ಪರಿಸರ ಹಾಳಾಗುತ್ತಿದ್ದು, ಇದು ಮಾನವನಿಂದಲೇ ಸರಿಯಾಗಬೇಕಿದೆ. ಮುಂದಿನ ಪೀಳಿಗೆಗೆ ಪರಿಸರದ ಬಗ್ಗೆ ಕಾಳಜಿ ಮೂಡಿಸದಿದ್ದರೆ ಮುಂದೆ ಹೆಚ್ಚಿನ ಅಪಾಯ ಎದುರಾಗಲಿದೆ ಹೀಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಸಂಸ್ಥೆಯ ಪರಿಸರ ಜಾಗೃತಿ ಹಾಗೂ ದಿನಾಚರಣೆ ನಿರಂತರವಾಗಿರಲಿ ಎಂದು ತಿಳಿಸಿದರು.

ಬಳ್ಳಾರಿ ಜಿಲ್ಲೆಯ ನಿರ್ದೇಶಕರಾದ ರೋಹಿತಾಕ್ಷ ಅವರು ಭಾಗವಹಿಸಿ ಜನರಿಗೆ ಪರಿಸರ ಜಾಗೃತಿ ಬಗ್ಗೆ ಮಾಹಿತಿ ನೀಡಿ ಪ್ರತಿ ಶುಭ ಕಾರ್ಯಗಳ ನೆನಪಿಗಾಗಿ ಒಂದು ಗಿಡ ನೆಟ್ಟು ಪರಿಸರವನ್ನು ಉಳಿಸುವ ಬಗ್ಗೆ ಬೆಳೆಸುವ ಬಗ್ಗೆ ಹಾಗೂ ಯೋಜನೆಯ ವಿವಿಧ ಕಾರ್ಯಕ್ರಮಗಳಾದ ದೇವಸ್ಥಾನ ಜೀರ್ಣೋದ್ಧಾರಕ್ಕೆ ನೀಡುವ ಸಹಾಯದಿಂದ ಬಗ್ಗೆ, ವಿಕಲಚೇತನರಿಗೆ ಉಚಿತವಾಗಿ ಪರಿಕರಗಳ ನೀಡುತ್ತಿರುವ ಬಗ್ಗೆ, ಶುದ್ಧ ಗಂಗಾ ಘಟಕ ನಿರ್ಮಾಣ ಬಗ್ಗೆ,ಹಿಂದೂ ರುದ್ರಭೂಮಿ ಅಭಿವೃದ್ಧಿ ಬಗ್ಗೆ, ಮಾರ್ಗದರ್ಶನ ನೀಡಿದರು. ಸದ್ರಿ ಕಾರ್ಯಕ್ರಮದಲ್ಲಿ ಕಂಪ್ಲಿ ಪುರಸಭೆ ಮಾಜಿ ಅಧ್ಯಕ್ಷರಾದ ಶ್ರೀ ಸುಧೀರ್ ಅವರು ಭಾಗವಹಿಸಿ ಧರ್ಮಸ್ಥಳ ಸಂಸ್ಥೆ ಮಾಡುತ್ತಿರುವ ಸಮಾಜಮುಖಿ ಕೆಲಸ ಕಾರ್ಯಗಳ ಬಗ್ಗೆ ಸಂತೋಷವನ್ನು ವ್ಯಕ್ತಪಡಿಸಿದರು.

ಪಾಂಡುರಂಗ ದೇವಸ್ಥಾನ ಕಮಿಟಿ ಸದಸ್ಯರಿಗೆ ಸುಮಾರು 80 ಗಿಡಗಳ ವಿತರಣೆ ಮಾಡಿ ಆವರಣದಲ್ಲಿ ಸಾಂಕೇತಿಕವಾಗಿ ಗಿಡಗಳ ನಾಟಿ ಮಾಡಲಾಯಿತು.

ತಾಲೂಕಿನ ಯೋಜನಾಧಿಕಾರಿಗಳಾದ ರಾಘವೇಂದ್, ಪಾಂಡುರಂಗ ದೇವಸ್ಥಾನದ ಅಧ್ಯಕ್ಷರಾದ ಶ್ರೀನಿವಾಸ್ ರೆಡ್ಡಿ, ಕಮಿಟಿ ಸದಸ್ಯರಾದ ಕೆ. ಚಂದ್ರಶೇಖರ, ಶ್ರೀನಿವಾಸ್, ದೇವಸ್ಥಾನ ಅರ್ಚಕರಾದ ಶ್ರೀ ರಾಘವೇಂದ್ರ,ಹಾಗೂ ದೇವಸ್ಥಾನ ಸಮಿತಿ ಸರ್ವಸದಸ್ಯರು,ಮತ್ತು ತಾಲೂಕಿನ ಕೃಷಿ ಮೇಲ್ವಿಚಾರಕರಾದ ಸಂಜುಕುಮಾರ್, ಎಮ್ಮಿಗನೂರು ವಲಯದ ಮೇಲ್ವಿಚಾರಕರಾದ ಮಂಜುನಾಥ್, ಸೇವಾ ಪ್ರತಿನಿಧಿಯಾದ ಪದ್ಮಾವತಿ ಹಾಗೂ ಸ್ವ ಸಹಾಯ ತಂಡದ ಸದಸ್ಯರು ಹಾಜರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!