ದಾವಣಗೆರೆ : ವಂದೇ ಭಾರತ್ ರೈಲಿನ ಚಕ್ರದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸಿಬ್ಬಂದಿ ಸಮಯ ಪ್ರಜ್ಞೆಯಿಂದ ಯಾವುದೇ ಅನಾಹುತ ಸಂಭವಿಸಿಲ್ಲ. ಭಾರೀ ದುರಂತವೊಂದು ತಪ್ಪಿದೆ. ವಂದೇ ಭಾರತ್ ರೈಲು ಧಾರವಾಡದಿಂದ ಬೆಂಗಳೂರಿಗೆ ಬರುತ್ತಿತ್ತು ರೈಲು ದಾವಣಗೆರೆ ಸನಿಹ ಬಂದಾಗ, ಚಕ್ರದಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರೈಲನ್ನು ದಾವಣಗೆರೆಯಲ್ಲಿ ನಿಲುಗಡೆ ಮಾಡಲಾಗಿದೆ. ಪ್ರಯಾಣಿಕರು ಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಬೆಂಗಳೂರಿಗೆ ಬಂದರು. ಗೇಟ್ ಮ್ಯಾನ್ನ ಸಮಯ ಪ್ರಜ್ಞೆಯಿಂದ ಸಾವಿರಾರು ಜನರ ಪ್ರಾಣ ಉಳಿದಿದೆ.
ವರದಿ : ಜಿಲಾನಸಾಬ್ ಬಡಿಗೇರ್



















