
ಯಾದಗಿರಿ/ಗುರುಮಠಕಲ್: ಪಟ್ಟಣದ ಅಂಬಿಗರ ಚೌದಯ್ಯ ವೃತ್ತದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಗಿರಿ ನಗರ ಸಾಂಸ್ಕೃತಿಕ ಕಲಾವಿದರ ಬಳಗದ ಸಂಯುಕ್ತ ಆಶ್ರಯದಲ್ಲಿ ಬಯಲು ನಾಟಕ ಪ್ರದರ್ಶನದ ಮೂಲಕ ಸಾರ್ವಜನಿಕರಲ್ಲಿ ಮಾದಕ ವಸ್ತುಗಳ ಉಪಯೋಗ ನಿಷೇಧಿಸುವಂತೆ ಜಾಗೃತಿ ಮೂಡಿಸಲಾಯಿತು.
ಗುರುಮಠಕಲ್ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕರಾದ ವೀರಣ್ಣ ದೊಡಮನಿಯವರ ನೇತೃತ್ವದಲ್ಲಿ ನಾಟಕ ಪ್ರದರ್ಶನವಾಯಿತು.
ಈ ಕುರಿತು ಮಾತನಾಡಿದ ಪಿ. ಐ ವೀರಣ್ಣ ದೊಡಮನಿಯವರು ಮಾದಕ ವಸ್ತುಗಳ ಪಿಡುಗನ್ನು ನಿರ್ಮೂಲನೆ ಮಾಡಲು ಕಠಿಣ ಕ್ರಮ ಕೈಗೊಳ್ಳಲಾಗುತ್ತಿದ್ದು, ಸಾರ್ವಜನಿಕರು ಸಹ ಒಟ್ಟಾಗಿ ಸೇರಿ ಈ ಪಿಡುಗಿನ ವಿರುದ್ದ ಕೈ ಜೋಡಿಸಬೇಕೆಂದು ಹೇಳಿದರು.
ಕಳೆದೆರಡು ದಿನಗಳಿಂದ ಮಾದಕ ವಸ್ತುಗಳ ಬಳಕೆಯಿಂದ ಆಗುವ ಅಡ್ಡ ಪರಿಣಾಮ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವಲ್ಲಿ ಗುರುಮಠಕಲ್ ಪೊಲೀಸ್ ಇಲಾಖೆಯಿಂದ ಸಭೆ ಹಾಗೂ ಬೀದಿ ನಾಟಕ ಪ್ರದರ್ಶನ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.
ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಸಾರ್ವಜನಿಕರು ಸಹ ಇಲಾಖೆಯ ಮಾರ್ಗ ಸೂಚಿ ಪಾಲನೆ ಮಾಡಿದಾಗ ಮಾತ್ರ ಭಾರಿ ಪ್ರಮಾಣದಲ್ಲಿ ಅಪರಾಧ ಪ್ರಕರಣಗಳು ಕಡಿಮೆಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ.
ವರದಿ: ಜಗದೀಶ್ ಕುಮಾರ್ ಭೂಮಾ



















