ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ನಾಡ ಪ್ರಭು ಕೆಂಪೇಗೌಡರ 516 ನೇ ಜಯಂತಿ ಆಚರಣೆ

ಚಾಮರಾಜನಗರ/ ಹನೂರು : ಪಟ್ಟಣದ ಲೋಕೋಪಯೋಗಿ ವಸತಿ ಗೃಹದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಾಡಪ್ರಭು ಕೆಂಪೇಗೌಡ 516 ನೇ ಜಯಂತಿಯನ್ನು ಶಾಸಕ ಎಂ.ಆರ್ ಮಂಜುನಾಥ್ ರವರು ನಾಡಪ್ರಭು ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು ನಾಡಪ್ರಭು ಕೆಂಪೇಗೌಡ ಅವರು ಬೆಂಗಳೂರು ನಿರ್ಮಾಣದಲ್ಲಿ ಅಪಾರ ಶ್ರಮ ವಹಿಸಿದ್ದ ಪರಿಣಾಮ ಇಂದು ಬೆಂಗಳೂರು ಬೃಹತ್ ಮಟ್ಟದಲ್ಲಿ ಬೆಳೆದಿದ್ದು, ವಿಶ್ವಖ್ಯಾತಿ ಗಳಿಸಿವೆ. ಕೆಂಪೇಗೌಡರು 16ನೇ ಶತಮಾನದಲ್ಲಿಯೇ ಬೆಂಗಳೂರು ಪಟ್ಟಣದ ನಿರ್ಮಾಣಕ್ಕೆ ಅಡಿಗಲ್ಲು ನೆಟ್ಟು ಮಹಾನಗರ ನಿರ್ಮಾಣದ ಕನಸು ಕಂಡಿದ್ದರು. ಆ ದಿನಗಳಲ್ಲಿಯೇ ವ್ಯವಾಹರಕ್ಕೆ ಒಂದು ರಸ್ತೆ, ವಾಸಕ್ಕೆ ಪ್ರತ್ಯೇಕ ಬಡಾವಣೆಗಳನ್ನು ನಿರ್ಮಾಣ ಮಾಡಿ ಪ್ರತಿಯೊಬ್ಬ ಕರಕುಶಲ ಕರ್ಮಿಗಳಿಗೂ ಅವಕಾಶ ಕಲ್ಪಿಸಿದ್ದ ಮಹಾ ದಕ್ಷ ಆಡಳಿತಗಾರ ಎಂದು ಬಣ್ಣಿಸಿದ ಸಂದರ್ಭ.

ಇದೇ ಸಂದರ್ಭದಲ್ಲಿ ಮಲೆ ಮಹದೇಶ್ವರ ವನ್ಯಧಾಮದ ಹೂಗ್ಯಂ ವನ್ಯಜೀವಿ ವಲಯದ ಮೀಣ್ಯಂನಲ್ಲಿ ಇತ್ತೀಚಿಗೆ ತಾಯಿ ಹುಲಿ ಹಾಗೂ ನಾಲ್ಕು ಹುಲಿ ಮರಿಗಳು ಅಸಹಜವಾಗಿ ಸಾವಿಗೀಡಾಗಿರುವುದಕ್ಕೆ ಸಂತಾಪ ಸೂಚಿಸಿ ಕೆಲವು ನಿಮಿಷ ಮೌನಾಚರಣೆ ಮಾಡುವ ಮೂಲಕ ಸಂತಾಪ ಸೂಚಿಸಲಾಯಿತು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಮಮ್ತಾಜ್ ಬಾನು, ಉಪಾಧ್ಯಕ್ಷರಾದ ಆನಂದ್ ಕುಮಾರ್, ಪಟ್ಟಣ ನಾಮ ನಿರ್ದೇಶನ ಸದಸ್ಯರಾದ ಮಹಾದೇಶ್, ಬಿಇಒ ಗುರುಲಿಂಗಯ್ಯ ತಹಶೀಲ್ದಾರ್ ಗುರುಪ್ರಸಾದ್, ಇ ಓ ಉಮೇಶ್, ತಾಲ್ಲೂಕು ತಾಲ್ಲೂಕು ಆರೋಗ್ಯ ಅಧಿಕಾರಿ ಪ್ರಕಾಶ್ ,ಗ್ಯಾರಂಟಿ ಯೋಜನೆಗಳ ತಾಲೂಕು ಅಧ್ಯಕ್ಷರಾದ ರಾಚಪ್ಪ, ಮುಖಂಡರುಗಳಾದ ರಾಜೂಗೌಡ, ತಮ್ಮಯ್ಯ ಗೌಡ, ವೆಂಕಟೇಗೌಡ, ಕೃಷ್ಣೇಗೌಡ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ವರದಿ :ಉಸ್ಮಾನ್ ಖಾನ್.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!