ಯಾದಗಿರಿ/ಗುರುಮಠಕಲ್: ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಅವಾಸ್ ಯೋಜನೆಯಡಿ ವಸತಿ ರಹಿತ (ಕಚ್ಚಾ ಮನೆ ಹೊಂದಿರುವ) ಮತ್ತು ನಿವೇಶನ ರಹಿತ ಕುಟುಂಬಗಳಿಗೆ ವಸತಿ ಸೌಲಭ್ಯ ಕಲ್ಪಿಸಲು ಕೇಂದ್ರ ಸರ್ಕಾರವು Unified web portal ನಲ್ಲಿ ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15-07-2025
ಗುರುಮಠಕಲ್ ಪುರಸಭೆಯ ವ್ಯಾಪ್ತಿಯೊಳಗೆ ಬರುವ ಎಲ್ಲಾ ವಾರ್ಡಗಳಲ್ಲಿ ಎಲ್ಲಾ ವಸತಿ ರಹಿತ (ಕಚ್ಚಾ ಮನೆ ಹೊಂದಿರುವ) ಮತ್ತು ನಿವೇಶನ ರಹಿತ ಅರ್ಹ ಫಲಾನುಭವಿಗಳಿಗೆ ವಸತಿ ಸೌಲಭ್ಯ ಪಡೆಯಲು ಕೇಂದ್ರ ಸರ್ಕಾರದ https//pmay.urban.gov.in ದಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಾರ್ಯಾಲಯದ ವಸತಿ ಶಾಖೆಯನ್ನು ಸಂಪರ್ಕಿಸಲು ಗುರುಮಠಕಲ್ ಪುರಸಭೆ ಮುಖ್ಯಾಧಿಕಾರಿ ಶ್ರೀಮತಿ ಭಾರತೀ ದಂಡೋತಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ: ಜಗದೀಶ್ ಕುಮಾರ್ ಭೂಮಾ



















