ಶಿವಮೊಗ್ಗ: ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಗೆ ಶಾಸಕರಾದ ಆರಗ ಜ್ಞಾನೇಂದ್ರ ರವರು ನಿನ್ನೆ ದಿಡೀರ್ ಭೇಟಿ ನೀಡಿದರು. ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಯ ಎಲ್ಲಾ ವೈದ್ಯರುಗಳನ್ನು ಸರ್ಕಾರ ದಿಡೀರ್ ವರ್ಗಾವಣೆ ಮಾಡಿರುವ ಹಿನ್ನಲೆಯಲ್ಲಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ತೊಂದರೆ ಆಗದಂತೆ ನೋಡಿಕೊಳ್ಳುವಂತೆ ವೈದ್ಯರಿಗೆ ಹಾಗೂ ನರ್ಸ್ ಗಳಿಗೆ ಶಾಸಕರು ಸಲಹೆ ನೀಡಿದರು ಹಾಗೂ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಸರ್ಕಾರ ರೋಗಿಗಳ ಜೊತೆ ಚೆಲ್ಲಾಟ ಆಡುತಿದೆ ವೈದ್ಯರುಗಳನ್ನು ಏಕಾ ಏಕಿ ವರ್ಗವಾಣೆ ಮಾಡಿ ಎಲ್ಲರಿಗೂ ತೊಂದರೆ ಕೊಡುತ್ತಿದೆ. ನಿಷ್ಠಾವಂತ ವೈದ್ಯರಿಗೆ ಶಿಕ್ಷೆ ನೀಡುತ್ತಿದೆ ಎಂದು ಹೇಳಿದರು.
ವರದಿ: ಪ್ರಸಾದ್ ಹೆಚ್ ಬಿ ತೀರ್ಥಹಳ್ಳಿ



















