ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

2025 ರ ದಸರಾ ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ಪಡೆದ ಕನ್ನಡದ ಮೊದಲ ಸಾಹಿತಿ ಬಾನು ಮುಷ್ತಾಕ್ ಅವರಿಂದ ಮಾಡಿಸಲು ಸರ್ಕಾರಕ್ಕೆ ತೇಜಸ್ವಿ ಮನವಿ

ಮೈಸೂರು: 2025 ರ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ಪಡೆದ ಕನ್ನಡದ ಮೊದಲ ಸಾಹಿತಿ, ಪ್ರಮುಖ ಲೇಖಕಿ ಎಸ್, ಕೆ, ಬಾನು ಮುಷ್ತಾಕ್ ಅವರ ‘ಹಾರ್ಟ್ ಲ್ಯಾಂಪ್ ‘ ಕೃತಿಗೆ ವಿಶ್ವದ ಮೇರು ಸಾಹಿತ್ಯ ಪ್ರಶಸ್ತಿಯಾದ 2025 ನೇ ಸಾಲಿನ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಒಲಿದಿದೆ.

ಲಂಡನ್ ನಲ್ಲಿ 2025 ಮೇ 20 ರಂದು ನಡೆದ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕೃತಿಯ ಅನುವಾದಕರಾದ ದೀಪ ಭಸ್ತಿ ಅವರೊಂದಿಗೆ ಬಾನು ಮುಷ್ತಾಕ್ ಅವರು ಈ ಪ್ರಶಸ್ತಿಯನ್ನು ಸ್ವೀಕರಿಸಿದ್ದರು.

ಬಾನು ಅವರು ‘ ಎದೆಯ ಹಣತೆ ‘ ಶೀರ್ಷಿಕೆಯಡಿ ಬರೆದಿದ್ದ ಈ ಕೃತಿಯನ್ನು ದೀಪಾ ಭಸ್ತಿಯವರು ‘ ಹಾರ್ಟ್ ಲ್ಯಾಂಪ್ ‘ ಹೆಸರಿನಲ್ಲಿ ಅನುವಾದಿಸಿದ್ದಾರೆ.

ಬೂಕರ್ ಪ್ರಶಸ್ತಿಯು ಕನ್ನಡ ಸಾಹಿತ್ಯಕ್ಕೆ ಸಿಕ್ಕ ಗೆಲುವು ಎಂದು ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗ ಸ್ವಾಮಿ ಸಂತಸ ವ್ಯಕ್ತಪಡಿಸಿದ್ದಾರೆ.

ಬಾನು ಮುಷ್ತಾಕ್ ಅವರು ಕನ್ನಡ ಸಾಹಿತ್ಯ ಲೋಕಕ್ಕೆ ನೀಡಿದ ಕೊಡುಗೆಯನ್ನು ಪರಿಗಣಿಸಿ ರಾಜ್ಯ ಸರ್ಕಾರ 2025 ರ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ಪಡೆದ ಮೊದಲ ಕನ್ನಡ ಸಾಹಿತಿ ಬಾನು ಮುಷ್ತಾಕ್ ಅವರಿಂದ ಉದ್ಘಾಟನೆ ಮಾಡಿಸುವ ಮೂಲಕ ಗೌರವ ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ತೇಜಸ್ವಿ ಮನವಿ ಮಾಡಿದ್ದಾರೆ.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!