ಬಳ್ಳಾರಿ/ ಕಂಪ್ಲಿ: ಇಲ್ಲಿಯ ಸರ್ಕಾರಿ ಪರಿಶಿಷ್ಟ ವರ್ಗಗಳ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯದಲ್ಲಿ ಜೆಸಿಐ ಕಂಪ್ಲಿ ಸೋನಾ ಸಂಸ್ಥೆ ವತಿಯಿಂದ ಮಂಗಳವಾರ ಸೆಲ್ಯೂಟ್ ಟು ಸೈಲೆಂಟ್ ಸ್ಟಾರ್ಸ್ (ಸದ್ದಿಲ್ಲದ ಸಾಧಕರಿಗೊಂದು ನಮನ) ಕಾರ್ಯಕ್ರಮ ಜರುಗಿತು.
ಸ್ಥಳೀಯ ಪ್ರಗತಿಪರ ರೈತರಾದ ಅಂಡಿ ಹುಲಿಗೆಮ್ಮ, ಯುಗಂಧರ ನಾಯ್ಡು ಮತ್ತು ಕೊಟ್ಟೂರು ರಮೇಶ್ ಅವರನ್ನು ಸನ್ಮಾನಿಸಲಾಯಿತು.
ಜೆಸಿಐ ಕಂಪ್ಲಿ ಸೋನಾ ಅಧ್ಯಕ್ಷ ಬಿ. ರಸೂಲ್ ಮಾತನಾಡಿ, ‘ರೈತರು ಬೆಳೆದ ಬೆಳೆಗಳಿಗೆ ಸಕಾಲಕ್ಕೆ ಬೆಂಬಲ ಬೆಲೆ ಘೋಷಿಸಬೇಕು. ಪರಿಹಾರಧನ, ವಿಮೆ, ಕೃಷಿ ನೀತಿಗಳು ಕೇವಲ ಘೋಷಣೆಗೆ ಸೀಮಿತಗೊಳ್ಳದೆ ಕಾರ್ಯರೂಪಕ್ಕೆ ತರುವ ಮೂಲಕ ರೈತರ ನೋವುಗಳಿಗೆ ಸ್ಪಂದಿಸುವ ಕೆಲಸ ಸರ್ಕಾರ ಮಾಡಬೇಕು’ ಎಂದರು.
ವರದಿ : ಜಿಲಾನಸಾಬ್ ಬಡಿಗೇರ್



















