ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ರಾಮಪುರದಿಂದ ಗರಿಕೆಖಂಡಿ ಮಾರ್ಗದಲ್ಲಿ ಕೈಗೊಂಡಿರುವ ರಸ್ತೆ ಡಾಂಬರೀಕರಣದ ಕಾಮಗಾರಿಯ ಸ್ಥಳಕ್ಕೆ ತೆರಳಿ ಪರಿಶೀಲಿಸಿ ಮಾತನಾಡಿದ ಅವರು ಈ ಮಾರ್ಗವು ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ಅಂತರರಾಜ್ಯ ಹೆದ್ದಾರಿಯಾಗಿದ್ದು, ನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳು ಸಂಚರಿಸುತ್ತವೆ. ಆದರೆ ಈ ಮಾರ್ಗದ ಅಲ್ಲಲ್ಲಿ ಗುಂಡಿಗಳು ನಿರ್ಮಾಣವಾಗಿ ಹಾಳಾಗಿತ್ತು. ಮಳೆ ಬಂದ ವೇಳೆ ಗುಂಡಿಗಳಲ್ಲಿ ನೀರು ನಿಲ್ಲುವಂತಾಗಿತ್ತು. ಇದರಿಂದ ವಾಹನ ಸವಾರರು ಸಂಚರಿಸಲು ತುಂಬಾ ತೊಂದರೆ ಅನುಭವಿಸುತ್ತಿದ್ದರು.
ಆದ್ದರಿಂದ ಲೋಕೋಪಯೋಗಿ ಇಲಾಖೆಯ ಅನುದಾನದಲ್ಲಿ ಸುಮಾರು 25 ಕೋಟಿ ರೂ. ಡಾಂಬರೀಕರಣ ಕಾಮಗಾರಿ ಕೈಗೊಳ್ಳಲಾಗಿದೆ. ಜವಾಬ್ದಾರಿ ಹೊತ್ತವರು ಸಂಪೂರ್ಣವಾಗಿ ಗುಣಮಟ್ಟ ಕಾಯ್ದುಕೊಳ್ಳುವುದರ ಜತೆಗೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕು. ಇನ್ನು ಕ್ಷೇತ್ರ ವ್ಯಾಪ್ತಿಯ ಕೆಲವು ಗ್ರಾಮಗಳಲ್ಲಿ ಅಗತ್ಯ ಮೂಲಸೌಕರ್ಯ ಕೊರತೆ ಇದ್ದು, ಹಂತ ಹಂತವಾಗಿ ಸಮಸ್ಯೆಯನ್ನು ಬಗೆಹರಿಸಲಾಗುವುದು. ಇದಕ್ಕೆ ಪೂರಕವಾಗಿ ಕಳೆದ ಹಲವು ದಶಕಗಳಿಂದ ವಿದ್ಯುತ್ ಸೌಕರ್ಯವಿಲ್ಲದೆ ವಾಸಿಸುತ್ತಿದ್ದ ಪಾಲಾರ್ ಹಾಡಿಗೆ ಬೆಳಕು ನೀಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಹದಗೆಟ್ಟಿರುವ ರಸ್ತೆಗಳ ಅಭಿವೃದ್ಧಿ ಸಂಬಂಧ ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ , ಈ ಬಗ್ಗೆ ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಕ್ರಮವಹಿಸಲಾಗುವುದು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯ ಸಹಾಯಕ ಇಂಜಿನಿಯರ್ ಮಹೇಶ್, ಮುಖಂಡರುಗಳಾದ ಡಿ.ಆರ್ ಹಾರ್ಡ್ವೇರ್ ಸೀನಪ್ಪ,ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಮಣಿ, ಬಾಳಯ್ಯ, ಅಗಸ್ಟೀನ್, ತಂಗವೇಲೂ, ಸಂತ್ಯಾಗು ಚಿನ್ನರಾಜು, ಹರಿ, ಜೋಸೆಫ್, ವೆಂಕಟೇಶ್, ಗೋವಿಂದ, ರಾಮು, ನಾಲಾರೋಡ್ ದಿನೇಶ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ವರದಿ: ಉಸ್ಮಾನ್ ಖಾನ್



















