ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪಂ.ಪಂಚಾಕ್ಷರಿ ಗವಾಯಿಗಳ ಪ್ರತಿಷ್ಠಾನ ಶೀಘ್ರದಲ್ಲಿ ಅಸ್ತಿತ್ವಕ್ಕೆ : ಜುಲೈ 13ರಂದು ಪದಾಧಿಕಾರಿಗಳ ಆಯ್ಕೆ

ಬಾಗಲಕೋಟೆ :ಕನ್ನಡ ನಾಡಿನ ಶ್ರೇಷ್ಠ ಸಂಗೀತಗಾರರು, ಕವಿ ಗವಾಯಿಗಳು, ಅಂಧ, ಅನಾಥ ಮಕ್ಕಳ ಆಶ್ರಯದಾತರು, ವರಪುರುಷರು, ಶಿವಯೋಗಿ, ಗಾನಯೋಗಿ. ಪಂ. ಪಂಚಾಕ್ಷರಿ ಗವಾಯಿಗಳ ಹೆಸರಿನಲ್ಲಿ ಪ್ರತಿಷ್ಠಾನವನ್ನು ಅಸ್ತಿತ್ವಕ್ಕೆ ತರಲು ಸರ್ವ ಸಿದ್ಧತೆಯು ಭರದಿಂದ ನಡೆದಿದೆ ಎಂದು ಖ್ಯಾತ ಗಾಯಕ ಆನಂದಕುಮಾರ್ ಕಂಬಳಿಹಾಳ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅವರು ಪತ್ರಿಕೆಯೊಂದಿಗೆ ಮಾತನಾಡುತ್ತಾ ಬಾಗಲಕೋಟೆ ಜಿಲ್ಲೆಯಲ್ಲಿ ನಿರಂತರ ಸಂಗೀತೋತ್ಸವ ನಡೆಯಬೇಕೆಂಬ ಸಂಕಲ್ಪದೊಂದಿಗೆ ನಮ್ಮ ಭಾಗದ ಕಲಾವಿದರು ಬೆಳೆಯಬೇಕು. ನಮ್ಮ ನೆಲ ಮೂಲ ಸಂಸ್ಕೃತಿ ಕಲೆಗಳು ಉಳಿಯಬೇಕು ಎಂಬ ಸದುದ್ದೇಶವನ್ನು ಇಟ್ಟುಕೊಂಡು ಗಾನಯೋಗಿ ಪಂಡಿತ್ ಪಂಚಾಕ್ಷರಿ ಗವಾಯಿಗಳ ಹೆಸರಿನಲ್ಲಿ ಪ್ರತಿಷ್ಠಾನವನ್ನು ಅಸ್ತಿತ್ವಕ್ಕೆ ತರಲು ಜಿಲ್ಲೆಯ ಕಲಾವಿದರೊಂದಿಗೆ ಮಾತನಾಡಿ ನಿರ್ಧರಿಸಲಾಗಿದೆ .ಈಗಾಗಲೇ ಹಲವು ಸುತ್ತು ಮಾತುಕತೆಗಳು ನಡೆದಿದೆ .ಇದೇ ಜುಲೈ 13 ರ ರವಿವಾರ ರಂದು ಬಾಗಲಕೋಟೆಯ ವಿದ್ಯಾಗಿರಿಯ ಸಾಯಿ ಮಂದಿರದಲ್ಲಿ ಮಧ್ಯಾಹ್ನ 12:30 ಕ್ಕೆ ಜಿಲ್ಲೆಯ ಸರ್ವ ಕಲಾವಿದರ ಸಭೆಯನ್ನು ಕರೆಯಲಾಗಿದೆ.
ಈ ಸಭೆಯಲ್ಲಿ ಹೆಸರಾಂತ ಶಾಸ್ತ್ರೀಯ ಸಂಗೀತಗಾರರು, ಸಾಹಿತಿಗಳು, ಸುಗಮ ಸಂಗೀತ, ಜನಪದ ಸಂಗೀತ, ಬಯಲು ರಂಗಭೂಮಿ, ನಾಟಕ ರಂಗಭೂಮಿ, ವೃತ್ತಿ ಮತ್ತು ಹವ್ಯಾಸಿ ಕಲಾವಿದರು ಸೇರಿದಂತೆ ಎಲ್ಲಾ ಕ್ಷೇತ್ರದ ಹಿರಿಯ ಕಿರಿಯ ಕಲಾವಿದರು ಪಾಲ್ಗೊಳ್ಳುವರು ಹಾಗಾಗಿ ಕಲಾ ಕ್ಷೇತ್ರದ ಎಲ್ಲ ಮುಖಂಡರುಗಳು .ಸಂಘ ಸಂಸ್ಥೆಗಳ ಮುಖಂಡರುಗಳು. ಈ ಸಭೆಯಲ್ಲಿ ಭಾಗವಹಿಸಿ ಪ್ರತಿಷ್ಠಾನದ ಕಾರ್ಯಕಲಾಪಕ್ಕೆ ಕೈಜೋಡಿಸಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲು ತಾವೆಲ್ಲರೂ ಸಹಕರಿಸಬೇಕೆಂದು ಗಾಯಕ ಆನಂದಕುಮಾರ್ ಪ್ರಕಟಣೆಯಲ್ಲಿ ಕೋರಿದ್ದಾರೆ.
ಈ ಸಂದರ್ಭದಲ್ಲಿ ಹಿರಿಯ ಕಲಾವಿದರಾದ ಶಂಕರಪ್ಪ ಮುಂದಿನಮನಿ, ಚಿನ್ನಪ್ಪಗೌಡ ಗಿಡ್ಡಪ್ಪಗೋಳ ಉಪಸ್ಥಿತರಿದ್ದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!