ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬಡ ಮತ್ತು ಮಧ್ಯಮ ಕುಟುಂಬಗಳಿಗೆ ಶಾಸಕ ಜೆ.ಎನ್.ಗಣೇಶ ಹಕ್ಕು ಪತ್ರ ವಿತರಣೆ

ಬಳ್ಳಾರಿ / ಕಂಪ್ಲಿ : ತಾಲೂಕಿನ ಎಮ್ಮಿಗನೂರು ಗ್ರಾ.ಪಂ. ವ್ಯಾಪ್ತಿಯಲ್ಲಿರುವ ಶ್ರೀರಾಮಚಂದ್ರಪುರ ಕ್ಯಾಂಪ್ ನಲ್ಲಿ ನೆಲೆಸಿರುವ ಬಡ ಕುಟುಂಬಗಳಿಗೆ ಹಕ್ಕು ಪತ್ರಗಳನ್ನು ಶುಕ್ರವಾರ ಶಾಸಕ ಜೆ. ಎನ್. ಗಣೇಶ ಸಮ್ಮುಖದಲ್ಲಿ ವಿತರಿಸಲಾಯಿತು.
ನಂತರ ಶಾಸಕ ಜೆ. ಎನ್. ಗಣೇಶ ಮಾತನಾಡಿ ಸುಮಾರು ವರ್ಷಗಳಿಂದ ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ಹಕ್ಕು ಪತ್ರದ ಸಮಸ್ಯೆ ಕಾಡುತ್ತಿತ್ತು. ಆದರೆ ಈಗ ಕಾಲ ಕೂಡಿ ಬಂದಿದ್ದು, ಇಲ್ಲಿನ 133 ಕುಟುಂಬಗಳ ಪೈಕಿ ಈಗ ಸಾಕೇಂತಿಕವಾಗಿ 50 ಕುಟುಂಬಗಳಿಗೆ ಹಕ್ಕು ಪತ್ರ ನೀಡಿದ್ದು ಇನ್ನುಳಿದ ಹಕ್ಕು ಪತ್ರಗಳನ್ನು ಕೆಲವೇ ದಿನದಲ್ಲಿ ವಿತರಿಸಲಾಗುವುದು ಎಂದರು.
ಬಡ ಹಾಗೂ ಮಧ್ಯಮ ವರ್ಗದ ಜನರ ಬದುಕು ಸುಂದರವಾಗಿರಬೇಕು ಈ ನಿಟ್ಟಿನಲ್ಲಿ ಹಲವು ವರ್ಷಗಳ ಕನಸು ನನಸಾದಂತಾಗಿದೆ ಮಕ್ಕಳನ್ನು ತಪ್ಪದೇ ಶಾಲೆಗೆ ಕಳುಹಿಸಿ ಸರ್ಕಾರದ ಸೌಲಭ್ಯವನ್ನು ಸದುಪಯೋಗ ಪಡೆಯಿರಿ ಎಂದರು.
ತಹಶೀಲ್ದಾರ್ ಮಂಜುನಾಥ ನಾಯ್ಕ ಮಾತನಾಡಿದರು.
ಈ ಸಂದರ್ಭದಲ್ಲಿ ಗ್ರಾ. ಪಂ ಅಧ್ಯಕ್ಷೆ ಶಾರದಮ್ಮ, ಕುರುಗೋಡು ಪುರಸಭೆ ಅಧ್ಯಕ್ಷ ಶೇಖಣ್ಣ, ಉಪಾಧ್ಯಕ್ಷ ಚನ್ನಪಟ್ಟಣ ಮಲ್ಲಿಕಾರ್ಜನ, ಕಂದಾಯ ಅಧಿಕಾರಿ ಆರ್. ಐ ಜಗದೀಶ, ಗ್ರಾಮ ಲೆಕ್ಕಾಧಿಕಾರಿ ಮಂಜುನಾಥ, ಸ್ಥಳೀಯ ಮುಖಂಡರು ಸೇರಿದಂತೆ ಅನೇಕರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!