ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸರ್ವ ಕಲಾವಿದರಿಂದ ಸರ್ಕಾರಕ್ಕೆ ಅಭಿನಂದನೆ :ದಿ.7 ರಂದು ಜಿಲ್ಲಾಧಿಕಾರಿಗಳಿಗೆ ಸತ್ಕಾರ

ಬಾಗಲಕೋಟೆ : ಕರ್ನಾಟಕದ ಜನಪ್ರಿಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ಸಿದ್ದರಾಮಯ್ಯ ಅವರ ಸಲಹೆಯಂತೆ ಕನ್ನಡ ಪರಂಪರೆ, ಇತಿಹಾಸ, ಸಾಹಿತ್ಯ, ಸಂಸ್ಕೃತಿ ಹಿರಿಮೆಯನ್ನು ಉಳಿಸುವ ನಿಟ್ಟಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವರಾದ ಶಿವರಾಜ್ ತಂಗಡಗಿ ಅವರು ಇಲಾಖೆಗೆ ಹೊಸ ರೂಪ ನೀಡುವ ಮೂಲಕ ಸಂಚಲನವನ್ನು ಸೃಷ್ಟಿಸಿದ್ದಾರೆ ಎಂದು ಕರ್ನಾಟಕ ರಾಜ್ಯ ಸರ್ವ ಕಲಾವಿದರ ಒಕ್ಕೂಟದ ಅಧ್ಯಕ್ಷ ಹಾಗೂ ಶ್ರೀ ಸಿದ್ಧಾರೂಢ ಭಾರತಿ ಆಶ್ರಮದ ಪ.ಪೂ.ಶರಣಬಸವ ಶಾಸ್ತ್ರಿಗಳು ಹೇಳಿದ್ದಾರೆ.
ಅವರು ಪತ್ರಿಕೆಯೊಂದಿಗೆ ಮಾತನಾಡುತ್ತಾ ಶಿವರಾಜ್ ತಂಗಡಗಿ ಅವರು ಸಚಿವರಾದ ಮೇಲೆ ಕಲಾವಿದರು ಮತ್ತು ಸಾಹಿತಿಗಳಿಗೆ ನೀಡುತ್ತಿದ್ದ ಮಾಶಾಸನವನ್ನು ಹೆಚ್ಚಳ ಮಾಡಿಸಿದ್ದಾರೆ. ಕಲಾವಿದರ ಮಾಶಾಸನವು 2500 ಕ್ಕೆ ಹೆಚ್ಚಳ ಮಾಡಲಾಗಿದೆ. ಕಲಾವಿದರ ಮಾಶಾಸನವು ಹೆಚ್ಚಾಗಬೇಕೆಂಬ ಬೇಡಿಕೆಯನ್ನು ಈಡೇರಿಸಿದ ಕರ್ನಾಟಕದ ಘನ ಸರ್ಕಾರಕ್ಕೆ ಅಭಿನಂದನೆ ಹೇಳುವುದು ಸವ೯ಕಲಾವಿದರ ಆದ್ಯ ಕರ್ತವ್ಯ .ಹಾಗಾಗಿ ಮಾಶಾಸನ ಪಡೆಯುತ್ತಿರುವ ಸವ೯ ಕಲಾವಿದರು ವಿವಿಧ ಸಾಂಸ್ಕೃತಿಕ ಸಂಘಟನೆಗಳ ಮುಖಂಡರು ಸೋಮವಾರ ದಿ.7ರಂದು ಮುಂಜಾನೆ 10-30 ಕ್ಕೆ ಜಿಲ್ಲಾಡಳಿತದ ಮುಂದೆ ಸೇರಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಳನ್ನು ಗೌರವಿಸಿ ಘನ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸವ೯ ಕಲಾವಿದರು ಈ ಅಭಿನಂದನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತಿಳಿಸಲಾಗಿದೆ. ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿಣಿ ಪವಿತ್ರ ಜಕ್ಕಪ್ಪನವರ್, ಉಪಾಧ್ಯಕ್ಷ ಚಿನ್ನಪ್ಪಗೌಡ ಗಿಡ್ಡಪ್ಪಗೋಳ, ಮುಖಂಡರಾದ ಯಲ್ಲಪ್ಪ ಪೂಜಾರ್, ಈಶ್ವರ ಹೊರಟ್ಟಿ, ಶಂಕರ ಲಮಾಣಿ, ಶಂಕರೆಪ್ಪ ತಂಬಾಕದ, ಪಾಂಡರಂಗ ಕನಸಗೇರಿ, ರಾಮಣ್ಣ ಗಲಗಲಿ, ಪರಯ್ಯ ಮಠಪತಿ, ಸದಾಶಿವ ಅಗೋಜಿ ಸೇರಿದಂತೆ ಮುಂತಾದವರು ಇದ್ದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!