ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕ ಮೊರಾರ್ಜಿ ವಸತಿ ಶಾಲೆ ಎದುರು ಸಾರ್ವಜನಿಕರು ಪ್ರತಿಭಟನೆ ನಡೆಸಿದರು. ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಶಮಿತಾ ಎಂಬ ವಿದ್ಯಾರ್ಥಿನಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು, ಹಾಸ್ಟೆಲಿನ ವಾರ್ಡನ್ ಹತ್ಯೆ ಎಂದಿದ್ದರೂ,
ಪೊಲೀಸರು ಇದನ್ನು ಆತ್ಮಹತ್ಯೆ ಪ್ರಕರಣ ಎಂದು ದಾಖಲಿಸಿಕೊಂಡಿದ್ದರು ಆದ್ರೆ ಇದು ಮೇಲ್ನೋಟಕ್ಕೆ ಕೊಲೆ ಎಂದು ಪೋಷಕರು ದೂರು ದಾಖಲಿಸಿದ್ದರು, ಅದರಿಂದ ಎಲ್ಲಾ ಸಾರ್ವಜನಿಕರು ಸೇರಿಕೊಂಡು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು ಬೇಗ ಕೊಲೆಗಾರರನ್ನು ಕಂಡುಹಿಡಿಯುವಂತೆ ಸಾರ್ವಜನಿಕರು ಒತ್ತಾಯಿಸಿದರು.
ವರದಿ :ಪ್ರಸಾದ್ ಹೆಚ್ ಬಿ ತೀರ್ಥಹಳ್ಳಿ.



















