
ಕಲಬುರಗಿ/ಸೇಡಂ: 2023-24ನೇ ಸಾಲಿನ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ (KKRDB) ‘ಅಕ್ಷರ ಆವಿಷ್ಕಾರ ಮೈಕ್ರೋ ಯೋಜನೆ’ ಅಡಿಯಲ್ಲಿ ಸೇಡಂ ತಾಲೂಕಿನ ಇಟಕಲ್ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ₹60 ಲಕ್ಷ ಮೊತ್ತದಲ್ಲಿ ನಿರ್ಮಿಸಲಾದ ನಾಲ್ಕು ಹೊಸ ಕೋಣೆಗಳನ್ನು ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ ಉದ್ಘಾಟನೆ ನೆರವೇರಿಸಿದರು.
ಈ ಸಂದರ್ಭ ಮಾತನಾಡಿದ ಸಚಿವರು, “ಅಕ್ಷರ ಆವಿಷ್ಕಾರ ಯೋಜನೆಯ ಮೂಲಕ ಶಾಲಾ ಮೂಲಸೌಕರ್ಯಗಳ ಅಭಿವೃದ್ಧಿಗೆ ಕಲ್ಯಾಣ ಕರ್ನಾಟಕದಲ್ಲಿ ವಿಶೇಷ ಆದ್ಯತೆ ನೀಡಲಾಗುತ್ತಿದೆ. ಇಟಕಲ್ ಗ್ರಾಮದಲ್ಲಿ ಈ ಹೊಸ ಕೋಣೆಗಳ ನಿರ್ಮಾಣದಿಂದ ಮಕ್ಕಳಿಗೆ ಉತ್ತಮ ಶೈಕ್ಷಣಿಕ ಪರಿಸರ ಸಿಕ್ಕಿದೆ. ತಾಲ್ಲೂಕಿನಲ್ಲಿ ಹೆಚ್ಚು ಸರ್ಕಾರಿ ನೌಕರರು ಇರುವ ಇಟಕಲ್ ಗ್ರಾಮವು ಶೈಕ್ಷಣಿಕ ಸಾಧನೆಯಲ್ಲಿ ಮಾದರಿಯಾಗುತ್ತಿದೆ” ಎಂದು ಹೇಳಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಸ್ಥಳೀಯ ಹಿರಿಯರು, ಅಧಿಕಾರಿಗಳು ಹಾಗೂ ಇತರ ಮುಖಂಡರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಗ್ರಾಮಸ್ಥರು ಸಚಿವರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿದರು.
ವರದಿ: ಜಗದೀಶ್ ಕುಮಾರ್ ಭೂಮಾ



















