
ಯಾದಗಿರಿ | ಗುರುಮಠಕಲ್: ಗ್ರಾಮ ಲೆಕ್ಕಾಧಿಕಾರಿಗಳಿಗೆ ಸರಕಾರದ ವತಿಯಿಂದ ಉಚಿತ ಲ್ಯಾಪ್ ಟಾಪ್ ವಿತರಣೆ ಮಾಡಿ ಜನಸ್ನೇಹಿಯಾಗಿ ಕಾರ್ಯ ನಿರ್ವಹಿಸಲು ಶಾಸಕ ಶರಣಗೌಡ ಕಂದಕೂರ ಸೂಚಿಸಿದರು.
ಪಟ್ಟಣದ ಶಾಸಕರ ಜನ ಸಂಪರ್ಕ ಕಚೇರಿಯಲ್ಲಿ ಲ್ಯಾಪ್ಟಾಪ್ಗಳನ್ನು ವಿತರಿಸಿ ಮಾತನಾಡಿದ ಅವರು, ಕಂದಾಯ ಇಲಾಖೆಯ ಮೂಲಕ ಗ್ರಾಮ ಮಟ್ಟದ ಆಡಳಿತ ಕಾರ್ಯಕ್ಷಮತೆ ಹೆಚ್ಚಿಸುವ ಉದ್ದೇಶದಿಂದ ಉಚಿತ ಲ್ಯಾಪ್ ಟಾಪ್ ವಿತರಿಸಲಾಗಿದೆ, ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಡಿಜಿಟಲೀಕರಣಕ್ಕೆ ಪೂರಕವಾಗಿದ್ದು ಗ್ರಾಮ ಮಟ್ಟದ ಆಡಳಿತದಲ್ಲಿ ತಾಂತ್ರಿಕ ಸಾಮರ್ಥ್ಯ ಹೆಚ್ಚಿಸಿ ಯಾದಗಿರಿ ಜಿಲ್ಲೆ ಇನ್ನೆರಡು ತಿಂಗಳಿನಲ್ಲಿ ಮೊಟ್ಟ ಮೊದಲ ಸ್ಥಾನದಲ್ಲಿ ಇರಲು ಪ್ರಾಮಾಣಿಕ ಪ್ರಯತ್ನ ಮಾಡಿ ಹಾಗೂ ಹಳ್ಳಿ ಜನ ಅಲೆದಾಟ ತಪ್ಪಿಸಿ ಎಂದು ಎಲ್ಲಾ ಗ್ರಾಮಧಿಕಾರಿಗಳಿಗೆ ಕಿವಿ ಮಾತು ಹೇಳಿದರು.
ಈ ಸಂದರ್ಭದಲ್ಲಿ ಶಾಸಕರು ತಾಲೂಕ ವಿಕಲಚೇತನರ ಕುಂದು ಕೊರತೆಗಳ ಕುರಿತು ಹಾಗೂ ವಿಕಲ ಚೇತನರ ಹಕ್ಕು ಒತ್ತಾಯದ ಸಮಾವೇಶ ಕುರಿತು RPD ಟಾಸ್ಕ ಸದಸ್ಯರೊಡನೆ ಸಮಾಲೋಚನೆ ಮಾಡಿದರು, ವಿಕಲ ಚೇತನರ ಸಮಸ್ಯೆಗಳಿಗೆ ಶೀಘ್ರವೇ ಪರಿಹರಿಸಲು ತಾಲೂಕ ದಂಡಾಧೀಕಾರಿಗಳಿಗೆ ಸೂಚನೆ ನೀಡಿದರು.
ವರದಿ: ಜಗದೀಶ್ ಕುಮಾರ್ ಭೂಮಾ



















