ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ನಿನ್ನೆ ವಿದ್ಯಾರ್ಥಿಗಳೊಂದಿಗೆ ಶಾಸಕರ ಸಂವಾದ, ಇಂದು ಎಲ್ಲಾ ಅಧಿಕಾರಿಗಳ ದೌಡು.

ಹಾಸ್ಟೆಲ್‌ ಹಾಗೂ ಶಾಲೆಗಳ ಭೇಟಿ, ಆಹಾರ ಗುಣಮಟ್ಟ ಪರಿಶೀಲನೆ

ಯಾದಗಿರಿ/ ಗುರುಮಠಕಲ್: ಪಟ್ಟಣದ ಪದವಿ ವಿದ್ಯಾರ್ಥಿಗಳ ವಸತಿನಿಲಯಕ್ಕೆ ಲವಿಶ್ ಓರ್ಡಿಯಾ, ಐಎಎಸ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ, ಜಿಲ್ಲಾ ಪಂಚಾಯತ್, ಯಾದಗಿರಿ ಹಾಗೂ ಸಮಾಜ ಕಲ್ಯಾಣ ಇಲಾಖೆ, ತಾಲೂಕ ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ, ಪುರಸಭೆ ಕಾರ್ಯಾಲಯದ ಮುಖ್ಯಾಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಿನ್ನೆ ನಡೆದ ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಶಾಸಕ ಶರಣಗೌಡ ಕಂದಕೂರು ಅವರಿಗೆ ವಿದ್ಯಾರ್ಥಿಗಳು ವಸತಿ ನಿಲಯಗಳಲ್ಲಿನ ಸಮಸ್ಯೆಗಳನ್ನು ಗಮನಕ್ಕೆ ತಂದಾಗ, ಜಿಲ್ಲಾ ಮುಖ್ಯಧಿಕಾರಿಗಳಿಗೆ ಮಾತನಾಡಿ ವೀಕ್ಷಿಸಲು ತಿಳಿಸಿದ ಪ್ರಯುಕ್ತ ಅಧಿಕಾರಿಗಳು ಇಂದು ಭೇಟಿ ಪರಿಶೀಲಿಸಿದರು.

ಡಿ. ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ, ಡಾ. ಬಿ. ಅರ್. ಅಂಬೇಡ್ಕರ್ ಮೆಟ್ರಿಕ್ ನಂತರದ
ವಸತಿ ನಿಲಯದಲ್ಲಿ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಶೌಚಾಲಯ, ಊಟದ ವ್ಯವಸ್ಥೆ, ಗ್ರಂಥಾಲಯ, ವಿದ್ಯುತ್ ಸಮಸ್ಯೆ, ಸೋಲಾರ್ ಬಿಸಿ ನೀರಿನ ವ್ಯವಸ್ಥೆ, ಸಂಗ್ರಹವಿದ್ದ ಧವಸ, ಧಾನ್ಯ, ತರಕಾರಿಗಳ ಗುಣಮಟ್ಟ ವ್ಯವಸ್ಥೆಯನ್ನು ಸರಿಯಾಗಿ ನಿರ್ವಹಿಸಲಾಗುತ್ತದೆಯೇ ಎಂಬುದನ್ನು ಪರಿಶಿಲಿಸಿದರು. ಸರಿಯಾಗಿ ಆಹಾರ ನೀಡಲಾಗುತ್ತದೆಯೇ ಇಲ್ಲವೇ, ಇನ್ನೂ ಏನಾದರೂ ಸಮಸ್ಯೆ ಇದ್ದಲ್ಲಿ ನಿರ್ಭಯವಾಗಿ ತಮ್ಮ ಬಳಿ ಹೇಳಿ ಎಂದು ವಿದ್ಯಾರ್ಥಿಗಳಿಂದ ಮಾಹಿತಿ ಪಡೆದರು.

ಸೋರುತ್ತಿರುವ ಸಿಂಟೆಕ್ಸ್‌ ಟ್ಯಾಂಕ್ ನೀರು, ಹಾಸ್ಟೆಲ್ ಸೋಲಾರ್ ಪ್ಯಾನೆಲ್ ದುರಸ್ತಿಗೊಳಿಸುವಂತೆ ಹಾಗೂ ವಸತಿನಿಲಯದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಲು ವಾರ್ಡನ್ ಗೆ ಸೂಚಿಸಿದರು.

ಪುರಸಭೆ ಕಾರ್ಯಾಲಯದ ಮುಖ್ಯಾಧಿಕಾರಿಗಳಿಗೆ ಹಾಸ್ಟೆಲ್ ಸುತ್ತಮುತ್ತಲಿನ ಪ್ರದೇಶ ಸ್ವಚ್ಛವಾಗಿಡಲು ಹಾಗೂ ತ್ವರಿತ ಗತಿಯಲ್ಲಿ ಕಾಂಪೌಂಡ್ ಗೋಡೆ ನಿರ್ಮಾಣ ಮಾಡಲು ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ತಾಲೂಕ ಪಂಚಾಯತ ಕಾರ್ಯನಿರ್ವಹಕ ಅಧಿಕಾರಿ ಅಂಬರೀಷ ಪಾಟೀಲ, ಪಿಡಿ. ಡಿಆರ್‌ಡಿಎ ಸಿ.ಬಿ. ದೇವರಮಣಿ, ಪುರಸಭೆ ಕಾರ್ಯಾಲಯದ ಮುಖ್ಯಾಧಿಕಾರಿ ಭಾರತಿ ದಂಡೋತಿ, ಹಿಂದುಳಿದ ವರ್ಗಗಳ ಉಪ ನಿರ್ದೇಶಕರು (DOBC)ಸದಾಶಿವ ನಾರಾಯಣಕರ, ತಾಲೂಕ ಹಿಂದುಳಿದ ವರ್ಗಗಳ ಅಧಿಕಾರಿ ಸಂತೋಷ ರೆಡ್ಡಿ, ಸಮಾಜ ಕಲ್ಯಾಣ ತಾಲೂಕಾಧಿಕಾರಿ ಬೇಬಿ, ಹಾಸ್ಟೆಲ್ ವಾರ್ಡನ್ ಶ್ರೀದೇವಿ ಹಾಜರಿದ್ದರು.

ವರದಿ: ಜಗದೀಶ್ ಕುಮಾರ್ ಭೂಮಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!