ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅಧರ್ಮದ ವಿರುದ್ಧ ಸಂಘಟಿತರಾಗಿ ಪ್ರಯತ್ನಿಸುವುದು ನಿಜವಾದ ಗುರುಕಾಣಿಕೆಯಾಗಿದೆ ! – ಶ್ರೀ. ಮೋಹನ ಗೌಡ, ಹಿಂದೂ ಜನಜಾಗೃತಿ ಸಮಿತಿ

ಮಂಗಳೂರಿನ ಭಗವತೀ ಕ್ಷೇತ್ತದ ಕೂಟಕ್ಕಲ ಆಡಿಟೋರಿಯಂನಲ್ಲಿ ಗುರುಪೂರ್ಣಿಮಾ ಮಹೋತ್ಸವ ಸಂಪನ್ನ

ಮಂಗಳೂರು: ಪ್ರಭು ಶ್ರೀರಾಮನು ರಾವಣನ ವಿರುದ್ಧ ವಾನರಸೇನೆಯ ಸಂಘಟನೆ ನಿರ್ಮಿಸಿದರು. ಛತ್ರಪತಿ ಶಿವಾಜಿ ಮಹಾರಾಜರೂ ಹಿಂದೂಗಳ ಮೇಲೆ ಆಕ್ರಮಣ ಮಾಡುವ ಇಸ್ಲಾಮೀ ಸುಲ್ತಾನರ ವಿರುದ್ಧ ಸಾಮಾನ್ಯ ಮಾವಳೆಗಳ ಸಂಘಟನೆಯನ್ನು ಮಾಡಿ ಹಿಂದವೀ ಸ್ವರಾಜ್ಯವನ್ನು ಸ್ಥಾಪಿಸಿದರು.
ಈ ಸಂಘಟನೆಯು ಧರ್ಮಕ್ಕಾಗಿ ತ್ಯಾಗ ಮಾಡುವ ಪ್ರೇರಣಾದಾಯಿ ವಿಚಾರದ ಮೇಲೆ ಆಗಿತ್ತು. ಇಂತಹ ನಿಸ್ವಾರ್ಥ ಸಂಘಟನೆ ನಿರ್ಮಾಣವಾದಾಗಲೇ ನಿಜವಾದ ಅರ್ಥದಲ್ಲಿ ರಾಮರಾಜ್ಯ ಮತ್ತು ಹಿಂದವೀ ಸ್ವರಾಜ್ಯ ಸಾಕಾರಗೊಳ್ಳುತ್ತದೆ. ಪ್ರಸ್ತುತ ಕಾಲದಲ್ಲಿಯೂ ಇಂತಹ ಸಂಘಟನೆಯ ಆವಶ್ಯಕತೆಯಿರುವುದರಿಂದ ಪ್ರಭು ಶ್ರೀರಾಮನಂತೆ ಆದರ್ಶ ಸಂಘಟನೆ ನಿರ್ಮಿಸಲು ಕಟಿಬದ್ಧರಾಗೋಣ ಎಂದು ಹಿಂದೂ ಜನಜಾಗೃತಿ ಸಮಿತಿಯ ಶ್ರೀ ಮೋಹನ ಗೌಡ ಇವರು ಕರೆ ನೀಡಿದರು. ಅವರು 10 ಜುಲೈ 2025, ಗುರುವಾರದಂದು ಮಂಗಳೂರಿನ ಭಗವತೀ ಕ್ಷೇತ್ರದ ಕೂಟಕ್ಕಲ ಆಡಿಟೋರಿಯಂನಲ್ಲಿ ನಡೆದ ಗುರುಪೂರ್ಣಿಮಾ ಮಹೋತ್ಸವದಲ್ಲಿ ಮಾತನಾಡುತ್ತಿದ್ದರು.

ಶ್ರೀ ಮೋಹನ ಗೌಡ ಇವರು ಮುಂದುವರೆಸಿ ಪ್ರಸ್ತುತ ಹಿಂದೂ ಸಮಾಜದ ಮೇಲೆ ಅನೇಕ ರೀತಿ ಆಘಾತಗಳಾಗುತ್ತಿವೆ. ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಮಾಯಕ ಹಿಂದೂಗಳ ಮೇಲೆ ದೌರ್ಜನ್ಯವೆಸಗಿದ ಘಟನೆಗಳು ಬೆಳಕಿಗೆ ಬಂದಿವೆ, ಇತ್ತೀಚೆಗೆ ಮಂಡ್ಯದಲ್ಲಿ ಮತಾಂಧರು ಗೋಹತ್ಯೆ ಮಾಡುತ್ತಿರುವಾಗ ಅನೇಕ ಹಿಂದೂಗಳು ಗೋರಕ್ಷಣೆ ಮಾಡಲು ಮುಂದಾದರೆ ಪೊಲೀಸರು ಗೋರಕ್ಷಕರನ್ನೇ ಬಂಧಿಸಿದರು. ವಕ್ಫ್ ಕಾನೂನಿನ ವಿರುದ್ಧ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ಮತಾಂಧರು ಗಲಭೆಗಳನ್ನು ನಡೆಸಿದರು. ಇದರಲ್ಲಿ ಪೊಲೀಸರ ಮೇಲೂ ಆಕ್ರಮಣ ಮಾಡಲಾಯಿತು, ಹಾಗೆಯೇ ಹಿಂದೂಗಳ ಮನೆಗಳು, ಅಂಗಡಿಗಳನ್ನು ಸುಡಲಾಯಿತು. ಉತ್ತರಪ್ರದೇಶ, ರಾಜಸ್ಥಾನ ಹಿಂದೂಗಳ ಧಾರ್ಮಿಕ ಮೆರವಣಿಗೆಗಳ ಮೇಲೆ ಮತಾಂಧರು ಕಲ್ಲು ತೂರಿ ಹಿಂಸಾಚಾರ ನಡೆಸಿದರು. ಒಟ್ಟಾರೆ ಅಂಶವೇನೆಂದರೆ, ಭಾರತದ ಮೇಲೆ ಆಂತರಿಕ ಮತ್ತು ಬಾಹ್ಯ ಶತ್ರುಗಳಿಂದ ನಡೆಯುತ್ತಿರುವ ಆಕ್ರಮಣಗಳು ಕೇವಲ ವಿಸ್ತರಣಾವಾದಕ್ಕಾಗಿ ಅಲ್ಲ, ಬದಲಾಗಿ ಹಿಂದೂ ಧರ್ಮವನ್ನು ನಾಶಪಡಿಸಲು ನಡೆಯುತ್ತಿವೆ. ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ‘ದೇಶ’ ಕೇಳಿ ಗುಂಡು ಹಾರಿಸದೆ, ‘ಧರ್ಮ’ ಕೇಳಿ ಗುಂಡು ಹಾರಿಸಿದರು. ಇನ್ನೂ ನಮ್ಮ ಮುಂದೆ ಲವ್ ಜಿಹಾದ್, ಲ್ಯಾಂಡ್ ಜಿಹಾದ್ ಮತಾಂತರದಂತಹ ಅನೇಕ ಸಮಸ್ಯೆಗಳು ಇವೆ. ಇದೆಲ್ಲವನ್ನೂ ನೋಡಿದಾಗ ಹಿಂದೆ ಪ್ರಭು ಶ್ರೀರಾಮರ ಕಾಲದಲ್ಲಿ ಶಿವಾಜಿ ಮಹಾರಾಜರ ಕಾಲದಲ್ಲಿ, ಹಕ್ಕ ಬುಕ್ಕರ ಕಾಲದಲ್ಲಿ ಇದೇ ರೀತಿ ಧರ್ಮಸಂಕಟಗಳು ಎದುರಿಗಿದ್ದವು. ಈ ಎಲ್ಲ ಸಂದರ್ಭಗಳಲ್ಲಿಯೂ ಅವರು ಗುರುಗಳ ಮಾರ್ಗದರ್ಶನ ಪಡೆದು ಧರ್ಮಸಂಸ್ಥಾಪನೆಯ ಕಾರ್ಯ ಮಾಡಿದ್ದಾರೆ. ಹಾಗಾಗಿ ಗುರುಶಿಷ್ಯ ಪರಂಪರೆಗೆ ಹಿಂದಿನಿಂದಲೂ ಅಷ್ಟೇ ಮಹತ್ವವಿದೆ. ಈಗ ನಾವೂ ಸಹ ಇಂದಿನ ಗುರುಪೂರ್ಣಿಮೆಯ ದಿನ ಧರ್ಮಸಂಸ್ಥಾಪನೆಗಾಗಿ ಸಂಘಟಿತರಾಗಲು ಸಂಕಲ್ಪ ಮಾಡಬೇಕಿದೆ ಎಂದರು.

ರಾಷ್ಟ್ರಧರ್ಮ ಸಂಘಟನೆಯ ಸಂಸ್ಥಾಪಕರಾದ ಶ್ರೀ ಸಂತೋಷ ಕೆಂಚಾಂಬ ಅವರು, ಗುರುಗಳ ಮಹತ್ವವನ್ನು ಒತ್ತಿ ಹೇಳಿದರು. ವಿದ್ಯಾರಣ್ಯರು ಮತ್ತು ರಾಮದಾಸ ಸ್ವಾಮಿಗಳಂತಹ ಮಹಾನ್ ಗುರುಗಳನ್ನು ಸ್ಮರಿಸುತ್ತಾ, ಭಾರತಕ್ಕೆ ಈಗ ಗುರುಗಳ ಮಾರ್ಗದರ್ಶನ ಅತ್ಯಂತ ಅಗತ್ಯವಿದೆ ಎಂದರು. ಮುಂಬರುವ ಆಪತ್ಕಾಲದಲ್ಲಿ ದೇಶಕ್ಕೆ ಕ್ಷಾತ್ರ ತೇಜಸ್ಸಿನ ಆವಶ್ಯಕತೆ ಇದ್ದು, ಭಯೋತ್ಪಾದನೆಯಂತಹ ಸಮಸ್ಯೆ , ಯುವಜನತೆ ವ್ಯಸನಗಳ ಕಡೆ ಸಾಗುತ್ತಿರುವುದು, ಹಾಗೂ ಜಾತಿ-ಭಾಷೆ ಹೆಸರಿನಲ್ಲಿ ಹಿಂದೂಗಳಲ್ಲಿ ನಡೆಯುತ್ತಿರುವ ವಿಭಜನೆಯಂತಹ ಸಮಸ್ಯೆಗಳಿಗೆ ಹಿಂದೂಗಳ ಸಂಘಟನೆಯೇ ಏಕೈಕ ಪರಿಹಾರ ಎಂದರು.

ಮಂಗಳೂರಿನ ಶಾಕರಾದ ಶ್ರೀ ವೇದವ್ಯಾಸ ಕಾಮತ್, ನ್ಯಾಯವಾದಿ ಬಾಲಕೃಷ್ಣ ಶರ್ಮ , ನ್ಯಾಯವಾದಿ. ವಿನಯ್ ಕುಮಾರ್ ಸ್ಟೇಟ್ ಬ್ಯಾಂಕ್ , ಹಿಂದೂ ಸೇವಾ ಸಮಿತಿ ಯ ಅಧ್ಯಕ್ಷರು ಯೋಗೀಶ್, ಸುರೇಂದ್ರ , ಸಾಮಾಜಿಕ ಕಾರ್ಯಕರ್ತರಾದ ಶ್ರೀ ಕಿರಣ್ ರೈ ಮತ್ತು 500 ಕ್ಕೂ ಹೆಚ್ಚು ಹಿಂದುತ್ವನಿಷ್ಠರು, ಧರ್ಮಾಭಿಮಾನಿಗಳು ಉಪಸ್ಥಿತರಿದ್ದರು.

ವರದಿ : ಶ್ರೀ .ಚಂದ್ರಶೇಖರ ಹೆಬ್ಬಾರ್ ಕೊಲ್ಯ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!