ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಾಮದೇವ ಮಹಾಂತ ಶಿವಾಚಾರ್ಯಗೆ ತುಲಾಭಾರ ಸೇವೆ

ಬಳ್ಳಾರಿ / ಕಂಪ್ಲಿ : ಗುರುವಿನ ಮಾರ್ಗದರ್ಶದಲ್ಲಿ ನಡೆದರೆ ಪ್ರತಿಯೊಬ್ಬರ ಭವಿಷ್ಯ ಉಜ್ವಲವಾಗಿರುತ್ತದೆ ಎಂದು ಎಮ್ಮಿಗನೂರು ಹಂಪಿ ಸಾವಿರ ದೇವರ ಮಠದ ಶ್ರೀ ವಾಮದೇವ ಮಹಾಂತ ಶಿವಾಚಾರ್ಯ ಮಹಾಸ್ವಾಮಿ ಹೇಳಿದರು. ತಾಲೂಕಿನ ಎಮ್ಮಿಗನೂರು ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದ ಗುರು ಪೌರ್ಣಿಮದ ವಿಶೇಷ ಕಾರ್ಯಕ್ರಮದಲ್ಲಿ ಭಕ್ತರಿಂದ ತುಲಾಭಾರ ಸ್ವೀಕರಿಸಿ ಮಾತನಾಡಿ, ಮಠ, ಮಂದಿರಗಳು ಭಕ್ತರಲ್ಲಿ ಧಾರ್ಮಿಕ ಮತ್ತು ಸಂಸ್ಕೃತಿಕ ಪರಂಪರೆಗಳ ನೆಲೆಗಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿವೆ. ಮಕ್ಕಳಲ್ಲಿ ಜ್ಞಾನದ ಬುತ್ತಿ ತುಂಬುವ ಜೊತೆಗೆ ದೇಶದ ಸಂಸ್ಕೃತಿ, ಸಂಸ್ಕಾರಗಳನ್ನು ಬೆಳೆಸುವ ಕೆಲಸವಾಗಬೇಕು ಎಂದರು. ನಂತರ ಮಾಜಿ ಸೈನಿಕ ಎಮ್ಮಿಗನೂರು ಶೇಕ್‌ಸಾಬ್ ಮಾತನಾಡಿ, ದೇಶಾಭಿಮಾನವನ್ನು ಪ್ರತಿಯೊಬ್ಬರು ಬೆಳೆಸಿಕೊಳ್ಳಬೇಕು. ಮಠ, ಮಂದಿರಗಳಿಂದ ದೇಶದ ಸಂಸ್ಕೃತಿ, ಸಂಸ್ಕಾರ ಉಳಿಯಲು ಸಾಧ್ಯವಾಗಿದೆ ಎಂದರು. ವರಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿ ಇವರು ಕಾರ್ಯಕ್ರಮದ ದಿವ್ಯ ಸಾನಿಧ್ಯವಹಿಸಿದ್ದರು. ಸೇವಾರ್ಥಿಗಳಾದ ಯಲ್ಲಾಪುರ ವಿರೇಶಪ್ಪ, ಚಾನಾಳ್ ರಾಮಣ್ಣ, ಚನ್ನಬಸವಗೌಡ, ನಾಗಭೂಷಣಗೌಡ, ಶಿವರಾಮಪ್ಪ, ದೊಡ್ಡ ಕರಿಯಪ್ಪ, ತಿಮ್ಮಪ್ಪ, ದಿ.ಓಬಳೇಶ ಧರ್ಮಪತ್ನಿ ರುಕ್ಕಮ್ಮ ಇವರು ವಾಮದೇವ ಮಹಾಂತ ಶಿವಾಚಾರ್ಯ ಮಹಾಸ್ವಾಮಿ ಇವರಿಗೆ ತುಲಾಭಾರ ಸೇವೆ ಸಲ್ಲಿಸಿದರು. ನಂತರ ಕೃಷಿಕ ಸೇವೆ ತುಲಾಭಾರವನ್ನು ಶಾಲಿಗನೂರು ಶ್ರೀನಿವಾಸಗೆ ಹಾಗೂ ದೇಶಸೇವೆ ತುಲಾಭಾರವನ್ನು ಮಾಜಿ ಸೈನಿಕ ಎಮ್ಮಿಗನೂರು ಶೇಕ್‌ಸಾಬ್ ಇವರಿಗೆ ಮಾಡಲಾಯಿತು. ಪುರಾಣ ಪ್ರವಚನ ಪ್ರಶಾಂತ ಸಾಗರ ಶಿವಾಚಾರ್ಯ, ಶಿವಪ್ರಕಾಶ ಶಿವಾಚಾರ್ಯ, ಪರಶುರಾಮ ಸಂಗೀತ ಸೇವೆ ಮತ್ತು ಯಲ್ಲಪ್ಪ ಇವರು ತಬಲಕ್ಕೆ ಸಾಥ್ ನೀಡಿದರು.
ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಶ್ರೀಮಠದಿಂದ ಸನ್ಮಾನಿಸಿ ಗೌರವಿಸಿ ಪ್ರೋತ್ಸಾಹಿಸಲಾಯಿತು.
ಈ ಸಂದರ್ಭದಲ್ಲಿ ಚೌಡಯ್ಯದಾನಪುರದ ಚಿತ್ರಶೇಖರ ಶಿವಾಚಾರ್ಯ ಮಹಾಸ್ವಾಮಿ, ವಿಮಲ ರೇಣುಕ ವೀರಮುಕ್ತಿ ಮುನಿ ಶಿವಾಚಾರ್ಯ ಮಹಾಸ್ವಾಮಿ, ಡಾ.ಕರಿಬಸವರಾಜೇಂದ್ರ ಮಹಾಸ್ವಾಮಿ, ಹೆಬ್ಬಾಳ ನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿ, ಮಲ್ಲಿಕಾರ್ಜುನ ಮಹಾಸ್ವಾಮಿ, ಮಾಜಿ ಶಾಸಕ ಸೋಮಶೇಖರರೆಡ್ಡಿ, ಮುಖಂಡರಾದ ಸದಾಶಿವಪ್ಪ ಸೇರಿದಂತೆ ಸ್ಥಳೀಯ ಹಾಗೂ ಸುತ್ತಮುತ್ತಲಿನ ಭಕ್ತರು ಪಾಲ್ಗೊಂಡಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!