ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಹಡಪದ ಅಪ್ಪಣ್ಣನವರ ಜಯಂತಿ ಆಚರಣೆ

ಬಾಗಲಕೋಟೆ : ಬಾದಾಮಿ ತಾಲೂಕಿನ ಕುಳಗೇರಿ ಕ್ರಾಸ್ ನಲ್ಲಿರುವ ಪಾಂಡುರಂಗ ದೇವಸ್ಥಾನದಲ್ಲಿ ಹಡಪದ ಅಪ್ಪಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಜಯಂತಿಯನ್ನು ಆಚರಿಸಲಾಯಿತು.
ಹಡಪದ ಅಪ್ಪಣ್ಣನವರ 891 ನೇ ಜಯಂತಿಯಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ರೇವಣ ಸಿದ್ದಯ್ಯ ಸ್ವಾಮಿ ಹಿರೇಮಠ ಅವರು ವಚನಗಳ ಮೂಲಕ ಕಾಯಕದ ಮಹತ್ವ ತಿಳಿಸಿ, ಸಮಾನತೆಯ ಸಂದೇಶ ಸಾರಿದ ಹಡಪದ ಅಪ್ಪಣ್ಣನವರು ವೈಚಾರಿಕ ಪ್ರಜ್ಞೆಯ ಶಿವಶರಣ ಎಂದು ಹೇಳಿದರು.
ಈ ಸಂದರ್ಭದಲ್ಲಿ ಗ್ರಾ. ಪಂ. ಸದಸ್ಯರು ಹನಮಂತ ನರಗುಂದ ಮಾತನಾಡಿ ಹಡಪದ ಅಪ್ಪಣ್ಣನವರು ಕಾಯಕವನ್ನೇ ತಮ್ಮ ಜೀವನವನ್ನಾಗಿಸಿಕೊಂಡಿದ್ದರು, ಎಲ್ಲರೂ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಕೆಲಸ ಮಾಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ದ್ಯಾಮಣ್ಣ ಹಡಪದ, ಅಪ್ಪಣ್ಣ ಹಡಪದ, ಪ್ರವೀಣ ಬೂದಿಹಾಳ, ಗುರುನಾಥ ಹುನಗುಂದ , ಪ್ರಕಾಶ ಹುನಗುಂದ, ಆರ್. ಎಸ್. ಹಿರೇಮಠ, ಎಚ್. ಎಚ್. ಡಂಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ವರದಿ : ನಿಂಬಯ್ಯ ಕುಲಕರ್ಣಿ, ಬಾದಾಮಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!