ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬಾದಾಮಿ ಬನಶಂಕರಿ ದೇವಿ ಆಶೀರ್ವಾದ ಪಡೆದ ನಿಖಿಲ್ ಕುಮಾರಸ್ವಾಮಿ

ಬಾಗಲಕೋಟೆ ಜಿಲ್ಲೆಯ ಬಾದಾಮಿಗೆ ಆಗಮಿಸಿದ ಜೆ. ಡಿ. ಎಸ್. ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿಯವರು ಜಿಲ್ಲಾಧ್ಯಕ್ಷ ಹನಮಂತ ಮಾವಿನಮರದ , ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಜೊತೆ ನವಶಕ್ತಿ ಪೀಠಗಳಲ್ಲಿ ಒಂದಾದ ಬಾದಾಮಿ ಶ್ರೀ ಬನಶಂಕರಿ ದೇವಸ್ಥಾನಕ್ಕೆ ತೆರಳಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ದೇವಿಯ ಆಶೀರ್ವಾದ ಪಡೆದರು. ನಂತರ ಅಲ್ಲಿಂದ ಮಠಾಧೀಶರ ಅಭ್ಯಾಸ ಕೇಂದ್ರ ಸುಕ್ಷೇತ್ರ ಶಿವಯೋಗ ಮಂದಿರಕ್ಕೆ ತೆರಳಿ ಗುರುಕುಮಾರಸ್ವಾಮಿಗಳ ಗದ್ದುಗೆಗೆ ನಮಸ್ಕರಿಸಿ ಶಿವಯೋಗಮಂದಿರದ ಮಹಾಸ್ವಾಮಿಗಳ ಆಶೀರ್ವಾದ ಪಡೆದರು ಈ ಸಂದರ್ಭದಲ್ಲಿ ಶ್ರೀಗಳು
ನಿಖಿಲ್ ಕುಮಾರಸ್ವಾಮಿಯವರಿಗೆ ಶಾಲು ಹೊದಿಸಿ ಆಶೀರ್ವದಿಸಿ ಮುಂದಿನ ನಿನ್ನ ಭವಿಷ್ಯ ಉಜ್ವಲವಾಗಿದೆ ಎಂದು ಹರಸಿ ಆಶೀರ್ವದಿಸಿದರು.

ಅದಾದ ನಂತರ ದಕ್ಷಿಣ ಕಾಶಿ ಮಹಾಕೂಟಕ್ಕೆ ತೆರಳಿ ದಕ್ಷಿಣ ಕಾಶಿ ಚಿಕ್ಕ ಹೊಂಡ, ದೊಡ್ಡ ಹೊಂಡ ದಲ್ಲಿ ಇಳಿದು ಆಲ್ಲಿನ ಪವಿತ್ರ ತೀರ್ಥ ಮುಟ್ಟಿ ಮುಂದಿನ ಚುನಾವಣೆಗೆ ಜೆ.ಡಿ.ಎಸ್.ಪಕ್ಷ ಅಧಿಕಾರಕ್ಕೆ ಬರಲಿ ಎಂದು ಹರಕೆ ಹೊತ್ತುಕೊಂಡು ಆಶೀರ್ವಾದ ಪಡೆದರು. ಮಹಾಕೂಟೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದರು. ದೇವಸ್ಥಾನದ ಅರ್ಚಕರು ನಿಖಿಲ್ ಕುಮಾರಸ್ವಾಮಿಯವರಿಗೆ ಸನ್ಮಾನ ಮಾಡಿ ಗೌರವಿಸಿದರು. ಇಲ್ಲಿಂದ ನಂತರ ಅದ್ದೂರಿ ಮೆರವಣಿಗೆಯಲ್ಲಿ ಪಾಲ್ಗೊಂಡು ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸುವರು.

ವರದಿ:- ನಿಂಬಯ್ಯ ಕುಲಕರ್ಣಿ, ಬಾದಾಮಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!