ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ನಿಖಿಲ್ ಕುಮಾರಸ್ವಾಮಿ ಅವರಿಗೆಕಿಕ್ಕಿರಿದ ಜನಸಾಗರದ ನಡುವೆ ಅದ್ದೂರಿ ಸ್ವಾಗತ

ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿ ಜೆ. ಡಿ. ಎಸ್. ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿಯವರಿಗೆ ಕಿಕ್ಕಿರಿದ ಜನಸಾಗರದ ನಡುವೆ ಅದ್ದೂರಿ ಮೆರವಣಿಗೆಯೊಂದಿಗೆ ಸ್ವಾಗತ ಕೋರಲಾಯಿತು.
ತೆರೆದ ವಾಹನದಲ್ಲಿ ಜೆ. ಡಿ. ಎಸ್. ನ ಬಾಗಲಕೋಟೆ ಜಿಲ್ಲಾಧ್ಯಕ್ಷ ಹನಮಂತ ಮಾವಿನಮರದ ಜೊತೆ ಇದ್ದರು.

ನಿಖಿಲ್ ಕುಮಾರಸ್ವಾಮಿಯವರು ನಗರದ ಬಸವೇಶ್ವರ ಸರ್ಕಲ್ ನಲ್ಲಿ ಜಗಜ್ಯೋತಿ ಬಸವೇಶ್ವರರ ಭಾವಚಿತ್ರಕ್ಕೆ ಹೂಮಾಲೆ ಹಾಕಿ ಗೌರವ ನಮನ ಸಲ್ಲಿಸಿ ಮೆರವಣಿಗೆಯಲ್ಲಿ ತೆರೆದ ವಾಹನ ಹತ್ತಿದರು.

ಮುಖ್ಯರಸ್ತೆ ಮೂಲಕ ಸಾಗಿದ ಮೆರವಣಿಗೆ ಟಾ೦ಗಾಸ್ಟ್ಯಾಂಡ್ ನಿಂದ ಪುಲಿಕೇಶಿ ವೃತ್ತದಿಂದ ವಾಹನದಿಂದ ಕೆಳಗೆ ಇಳಿದ ಯುವನಾಯಕ ನಿಖಿಲ್ ಕುಮಾರಸ್ವಾಮಿ ನಡೆದುಕೊಂಡೇ ಡಾ. ಬಾಬಾಸಾಹೇಬ ಅಂಬೇಡ್ಕರ್ ಸರ್ಕಲ್ ಗೆ ತೆರಳಿ ಬಾಬಾಸಾಹೇಬ ಅಂಬೇಡ್ಕರ್ ಅವರ ಪ್ರತಿಮೆಗೆ ಹೂಮಾಲೆ ಹಾಕಿ ಗೌರವ ನಮನ ಸಲ್ಲಿಸಿ ನಡೆದುಕೊಂಡೇ ಬಂದರು. ರಾಮದುರ್ಗ ಕ್ರಾಸ್ ನಿಂದ ಶ್ರೀ ವೀರಪುಲಿಕೇಶಿ ಶಿಕ್ಷಣ ಸಂಸ್ಥೆಯ ಒಳಾಂಗಣ ಕ್ರೀಡಾಂಗಣದಲ್ಲಿನ ಭವ್ಯ ವೇದಿಕೆಗೆ ಆಗಮಿಸಿದ ನಂತರ ನಾಡಗೀತೆಯೊಂದಿಗೆ ಕಾರ್ಯಕ್ರಮ ಶುರುವಾಯಿತು.
ರೈತನನ್ನು ನೆನೆಯುತ್ತಾ ಹಾಡಿನೊಂದಿಗೆ ಸಸಿಗೆ ನೀರು ಹಾಕುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿಯವರಿಗೆ ಜಿಲ್ಲಾಧ್ಯಕ್ಷರಾದ ಹನಮಂತ ಮಾವಿನಮರದ ಸನ್ಮಾನ ಮಾಡಿ ಚಾಲುಕ್ಯರ ಅರಸ ಪುಲಿಕೇಶಿಯ ನೆನಪಿನ ಕಾಣಿಕೆ ನೀಡಿದರು. ಶಾಲಾ ಮಕ್ಕಳು ನಿಖಿಲ್ ಕುಮಾರಸ್ವಾಮಿ ಯವರನ್ನು ಭೇಟಿಯಾಗುವ ಕಾತುರ ಗಮನಿಸಿದ ನಿಖಿಲ್ ಕುಮಾರಸ್ವಾಮಿಯವರು ಅವರನ್ನು ವೇದಿಕೆಗೆ ಕರೆಸಿ ಎಲ್ಲಾ ಶಾಲಾ ವಿದ್ಯಾರ್ಥಿಗಳ ಆಸೆಯಂತೆ ಅವರ ಜೊತೆ ಫೋಟೋ ತೆಗೆಸಿಕೊಂಡು ಅವರನ್ನು ಖುಷಿಪಡಿಸಿ ಸರಳತೆ ಮೆರೆದರು.

ಜಿಲ್ಲಾಧ್ಯಕ್ಷರಾದ ಹನಮಂತ ಮಾವಿನಮರದ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ನಂತರ ನಿಖಿಲ್ ಕುಮಾರಸ್ವಾಮಿಯವರು ಕಾಂಗ್ರೆಸ್ ಸರಕಾರದ ಆಡಳಿತದ ಬಗ್ಗೆ, ಜನರಿಗೆ ಸಮರ್ಪಕವಾದ ಗ್ಯಾರಂಟಿ ಯೋಜನೆಗಳು ತಲುಪದೇ ಜನರು ಪರದಾಡುವ ಪರಿಸ್ಥಿತಿಗಳ ಬಗ್ಗೆ ಹಾಗೂ ಸಿದ್ದರಾಮಯ್ಯನವರಿಗೆ ರಾಜಕೀಯ ಪುನರ್ಜನ್ಮ ನೀಡಿದ ಬಾದಾಮಿ ಮತಕ್ಷೇತ್ರದ ಜನತೆ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದರ ಬಗ್ಗೆ ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡರು. ಜಾತ್ಯಾತೀತ ಜನತಾ ದಳ ಪಕ್ಷದೊಂದಿಗೆ, ಭವಿಷ್ಯದ ಭದ್ರ ಬುನಾದಿಗೆ ಹನಮಂತ ಮಾವಿನಮರದ ಇವರೊಂದಿಗೆ ಕೈ ಜೋಡಿಸಿ ಎಂದು ಬಾದಾಮಿ ಮತಕ್ಷೇತ್ರದ ಜನತೆಗೆ ಮನವಿ ಮಾಡಿದರು.

ವೇದಿಕೆಯಲ್ಲಿ ಜ್ಯಾತ್ಯಾತೀತ ಜನತಾದಳದ ಬಾದಾಮಿ, ಗುಳೇದಗುಡ್ಡ ಹಾಗೂ ವಿವಿಧ ಜಿಲ್ಲೆ ತಾಲ್ಲೂಕುಗಳಿಂದ ಆಗಮಿಸಿದ್ದ ನಾಯಕರು, ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು, ಅಭಿಮಾನಿಗಳು ಉಪಸ್ಥಿತರಿದ್ದರು.

ವರದಿ: ನಿಂಬಯ್ಯ ಕುಲಕರ್ಣಿ, ಬಾದಾಮಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!