ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಂಪ್ಲಿಯಲ್ಲಿ ಭೀಮ್ ಆರ್ಮಿಯಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಹಾಗೂ ಸಸಿ ನೆಡುವ ಕಾರ್ಯಕ್ರಮ

ಬಳ್ಳಾರಿ/ ಕಂಪ್ಲಿ : ತಾಲೂಕಿನ ನಂ. 10 ಮುದ್ದಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭೀಮ್ ಆರ್ಮಿ ಕಂಪ್ಲಿ ತಾಲೂಕು ಘಟಕದ ವತಿಯಿಂದ ಸಮಾಜಮುಖಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಶಾಲೆಯ ವಿದ್ಯಾರ್ಥಿಗಳಿಗೆ ಉಪಯುಕ್ತ ಪುಸ್ತಕಗಳು ಹಾಗೂ ಪೆನ್ಗಳನ್ನು ವಿತರಿಸಲಾಯಿತು. ಜೊತೆಗೆ ಪರಿಸರ ಸಂರಕ್ಷಣೆಯ ಸಂದೇಶವನ್ನೆರೆಯುತ್ತಾ ಸಸಿ ನೆಡುವ ಕಾರ್ಯಕ್ಕೂ ಭೀಮ್ ಆರ್ಮಿ ಪ್ರೋತ್ಸಾಹ ನೀಡಿದೆ.

ಈ ಸಂದರ್ಭದಲ್ಲಿ ಭೀಮ್ ಆರ್ಮಿ ಅಧ್ಯಕ್ಷ ಎ.ಎಸ್. ಯಲ್ಲಪ್ಪ ಅವರು ಮಾತನಾಡುತ್ತಾ,
ಭೀಮ್ ಆರ್ಮಿಯು ಕೇವಲ ಹೋರಾಟದ ವೇದಿಕೆಯಾಗಿರದೇ, ಸಮಾಜದ ಒಳಿತಿಗಾಗಿ ವಿವಿಧ ಸೇವಾ ಕಾರ್ಯಗಳನ್ನು ಕೈಗೊಂಡು ಬಂದಿದೆ. ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವಿನ ಭಾಗವಾಗಿ ಈ ಪುಸ್ತಕ ವಿತರಣಾ ಕಾರ್ಯಕ್ರಮ ಆಯೋಜಿಸಲಾಗಿದೆ. ಮುಂದಿನ ದಿನಗಳಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಗಮನ ಹರಿಸುವುದು ನಮ್ಮ ಉದ್ದೇಶ” ಎಂದರು.

ಶಾಲೆಯ ಮುಖ್ಯಗುರು ಮಂಜುನಾಥ್ ರವರು ಮಾತನಾಡಿ ಸರ್ಕಾರಿ ಶಾಲೆಗಳಿಗೆ ಸಂಘ ಸಂಸ್ಥೆಗಳ ಸಹಕಾರ ಅತ್ಯಂತ ಅವಶ್ಯಕ. ಮಾಸಿಕ ಅಥವಾ ತ್ರೈಮಾಸಿಕವಾಗಿ ಶಾಲೆಗೆ ಭೇಟಿ ನೀಡಿ ಮಕ್ಕಳ ಸಮಸ್ಯೆಗಳ ಕುರಿತು ಸ್ಪಷ್ಟವಾಗಿ ಅರಿದು ನೆರವಿನ ಕೈಚೆಲ್ಲಿದರೆ, ಶೈಕ್ಷಣಿಕ ಬೆಳವಣಿಗೆಗೆ ವೇಗ ಸಿಗುತ್ತದೆ” ಎಂಬ ಸಂದೇಶ ನೀಡಿದರು.

ಈ ಕಾರ್ಯಕ್ರಮದಲ್ಲಿ ಭೀಮ್ ಆರ್ಮಿಯ ತಾಲೂಕು ಉಪಾಧ್ಯಕ್ಷ ಧನಂಜಯ, ಬಸವರಾಜ್, ಮನೋಜ್ ಕುಮಾರ್, ವೀರೇಶ್, ಎಚ್. ಗೋಪಾಲ್, ಶ್ರೀನಿವಾಸ್, ರೇಣುಕಪ್ಪ, SDMC ಅಧ್ಯಕ್ಷೆ ಪದ್ಮಾವತಿ ಉಪಸ್ಥಿತರಿದ್ದರು. ಹಾಗೆಯೇ ಶಿಕ್ಷಕರಾದ ಮಂಜುಳಾ, ಬಸವರಾಜ್, ಸಿ. ಚಂದ್ರಪ್ಪ, ಗಂಗಮ್ಮ, ಶಾರದಮ್ಮ, ಕನಕರಾಯ, ಮಂಜಮ್ಮ, ಉಷಾ, ಮುಸ್ಕಾನ್ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ವರದಿ : ಜಿಲಾನಸಾಬ್ ಬಡಿಗೇರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!