ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವೇತನ ಅನುದಾನ ಭಾಗ್ಯ ನೀಡುವಂತೆ ಆಗ್ರಹ

ವಿಜಯಪುರ :1987 ರಿಂದ 1992 ರವರೆಗೆ ಎಸ್ ಎಂ ಕೃಷ್ಣ ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವ ಎಚ್ ವಿಶ್ವನಾಥ ಇದ್ದಾಗ ಎಸ್ ಸಿ, ಎಸ್ ಟಿ ಶಾಲಾ ಕಾಲೇಜುಗಳು ಅನುದಾನಕ್ಕೆ ಒಳಪಟ್ಟಿವೆ. ತದ ನಂತರ 2008ರಲ್ಲಿ ಬಿಜೆಪಿ ಜೆಡಿಎಸ್ ಸಮಿಶ್ರ ಸರ್ಕಾರದಲ್ಲಿ ಸನ್ಮಾನ್ಯ ಶ್ರೀ ಬಿಎಸ್ ಯಡಿಯೂರಪ್ಪನವರು ಮುಖ್ಯಮಂತ್ರಿ ಹಾಗೂ ಬಿ ಎಸ್ ಹೊರಟ್ಟಿ ಶಿಕ್ಷಣ ಮಂತ್ರಿ ಆಗಿದ್ದಾಗ 1992 ರಿಂದ 1995 ಡಿಸೆಂಬರ್ 31ರ ತನಕ ಅನುದಾನ ಕೊಟ್ಟಿದ್ದಾರೆ ಆದರೆ 1995 ರಿಂದ 2025 ರವರೆಗೆ ಅಂದರೆ 30 ವರ್ಷಗಳಿಂದ ಪ್ರಾರಂಭವಾದ ಶಾಲಾ ಕಾಲೇಜುಗಳಿಗೆ ಅನುದಾನ ಭಾಗ್ಯ ಇಲ್ಲ ಚಳುವಳಿ, ಹಲವಾರು ಹೋರಾಟ ಮಾಡಿದರು ಪ್ರತಿಫಲ ಸಿಕ್ಕಿಲ್ಲ , ನೊಂದ ನೂರಾರು ಶಾಲಾ ಶಿಕ್ಷಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಕುಟುಂಬ ನಡೆಸಲು ಹಲವಾರು ಶಿಕ್ಷಕರು ತೊಂದರೆ ಅನುಭವಿಸುತ್ತಿದ್ದಾರೆ. ಕನ್ನಡ ಭಾಷೆಯ ಉಳಿವಿಗೆ ಒತ್ತು ನೀಡಿ ಈ ಶಾಲೆಗಳಲ್ಲಿ ಕೆಲಸ ಮಾಡುವ ಶಿಕ್ಷಕರ ಬದುಕಿಗೆ ಹಾಗೂ ವ್ಯಾಸಂಗ ಮಾಡುತ್ತಿರುವ ಲಕ್ಷಾಂತರ ಬಡ ಮಕ್ಕಳಿಗೆ ಆಶ್ರಯ ಆಗಬೇಕೆಂದು ನೊಂದ ಶಿಕ್ಷಕರಾದ ಎನ್ ಜಿ ಚೌದ್ರಿ ಅಧ್ಯಕ್ಷರು (ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆ ತಾಂಬಾ), ಶಿವಶರಣ ಕಣ್ಣಿ ರಮೇಶ್ ಬಿರಾದಾರ್, ಎಂ ಡಿ .ಶೇಕ್ ಅವರು ಆಗ್ರಹಿಸಿದ್ದಾರೆ.

ವರದಿ: ಲೋಹಿತಕುಮಾರ ರೂಗಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!