ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಜಿಲ್ಲಾ ಕಬ್ಬು ಬೆಳೆಗಾರರ ಸಂಘದ ನಿಯೋಗ ಡಿಸಿ ಕಚೇರಿಗೆ : ಕಬ್ಬು ಬೆಳೆಗಾರರ ಸಮಸ್ಯೆಗೆ ಸ್ಪಂದಿಸಿದ ಆಹಾರ ಇಲಾಖೆ ಅಧಿಕಾರಿ

ಕಲ್ಬುರ್ಗಿ : ಕಬ್ಬು ಬೆಳೆಗಾರ ಸಂಘದ ವತಿಯಿಂದ ಜಿಲ್ಲೆಯ ರೈತರ ಕುಂದು ಕೊರತೆಗಳನ್ನು ಮಾನ್ಯ ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಯಿತು ಮತ್ತು ಸಕ್ಕರೆ ಕಾರ್ಖಾನೆಗಳು ಪ್ರಾರಂಭಕ್ಕೂ ಮುಂಚಿತವಾಗಿ ಮುಂದೆ ಕಬ್ಬು ಬೆಳೆಗಾರರಿಗೆ ಯಾವುದೇ ಸಮಸ್ಯೆ ಆಗದಂತೆ, ಕಬ್ಬಿಗೆ ಎಫ್ ಆರ್ ಪಿ ಕಿಂತಲೂ ಹೆಚ್ಚುವರಿ ಬೆಲೆ ನಿಗದಿಪಡಿಸಬೇಕು ಮತ್ತು ಕಾರ್ಖಾನೆ ಮುಂಭಾಗದಲ್ಲಿ ತೂಕದ ಯಂತ್ರ ಅಳವಡಿಸುವುದು. ದ್ವಿಪಕ್ಷ ಒಪ್ಪಂದ ಜಾರಿಗೆ ತರುವುದು ಮತ್ತು ರೈತರ ಹಲವಾರು ಬೇಡಿಕೆಗಳ ಕುರಿತು ಸರ್ಕಾರಿ ಅಧಿಕಾರಿಗಳು ಮತ್ತು ರೈತರು ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ ಕರೆದು ಮುಂದೆ ರೈತರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳಿಗೆ ಮತ್ತು ಆಹಾರ ಇಲಾಖೆ ಅಧಿಕಾರಿಗಳಿಗೆ ಗಮನಕ್ಕೆ ತಂದು ಮನವಿ ಪತ್ರ ಸಲ್ಲಿಸಲಾಯಿತು. ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಕೂಡಲೆ ಸಭೆ ಕರೆದು ರೈತರಿಗೆ ಮುಂದೆ ಸಮಸ್ಯೆ ಆಗದಂತೆ ಚರ್ಚಿಸುವುದಾಗಿ ಭರವಸೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾ ಕಬ್ಬು ಬೆಳೆಗಾರ ಸಂಘದ ಅಧ್ಯಕ್ಷರಾದ ರಮೇಶ್ ಹೂಗಾರ್ ಹಾಗೂ ನಿಕಟಪೂರ್ವ ಅಧ್ಯಕ್ಷರಾದ ಜಗದೀಶ್ ಪಾಟೀಲ್ ರಾಜಪುರ್, ಪದಾಧಿಕಾರಿಗಳಾದ ವೀರಣ್ಣ ಗಂಗಾಣಿ ರಟಕಲ್ ರೈತ ಸೇನೆ ತಾಲೂಕ ಅಧ್ಯಕ್ಷರು ಕಾಳಗಿ , ಶಿವರಾಜ್ ಪಾಟೀಲ್ ಗೋಣಿಗಿ ರೈತ ಸಂಘ ಜಿಲ್ಲಾ ಕಾರ್ಯದರ್ಶಿಗಳು, ಶರಣು ಮಾಗ ಹರಸೂರು, ಶಾಂತಿವೀರಪ್ಪ ಪಾಟೀಲ್ ದಸ್ತಾಪುರ್, ಸಂತೋಷ್ ಪಾಟೀಲ್ ಶಹಾಬಾದ್, ಇನ್ನೂ ಅನೇಕರು ಉಪಸ್ಥಿತರಿದ್ದರು.

ವರದಿ ಚಂದ್ರಶೇಖರ್ ಆರ್. ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!