ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬಗರ್ ಹುಕುಂ ಸಾಗುವಳಿಯನ್ನು ಕಾಲಮಿತಿಯೊಳಗೆ ಇತ್ಯರ್ಥಗೊಳಿಸಬೇಕು : ಕರ್ನಾಟಕ ದಲಿತ ಸಂಘರ್ಷ ಸಮಿತಿ

ಚಾಮರಾಜನಗರ/ ಹನೂರು :ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗ ಭೂ ಹೀನ ತಳ ಸಮುದಾಯಗಳು ಉಳುಮೆ ಮಾಡುತ್ತಿರುವ ಬಕ‌ರ್ ಹುಕಂ ಸಾಗುವಳಿಯನ್ನು ಕಾಲಮಿತಿಯೊಳಗೆ ಇತ್ಯರ್ಥಗೊಳಿಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಪ್ರಧಾನ ಸಂಚಾಲಕ ಸಿದ್ದರಾಜು ದೊಡ್ಡಿಂದುವಾಡಿ ಹೇಳಿದರು.
ಪಟ್ಟಣದ ತಾಲೂಕು ಆಡಳಿತ ಕಚೇರಿ ಬಳಿ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಒತ್ತಾಯಿಸಿ ಶಿರಸ್ತೇದಾರ ನಾಗೇಂದ್ರ ಅವರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದರು. ತಾಲೂಕಿನಲ್ಲಿ ಬಕ‌ರ್ ಹುಕುಂ ಸಾಗುವಳಿ ಮಾಡುತ್ತಿರುವ ದಲಿತರನ್ನು ಅರಣ್ಯ ಭೂಮಿ, ಸಾಮಾಜಿಕ ಅರಣ್ಯ ಕರಣ, ಗೋವುಗಳ ಗೋಮಾಳಗಳಿಗೆ ಕಾಯ್ದಿರಿಸುವ ನೆಪದಲ್ಲಿ ಒಕ್ಕಲ ಎಬ್ಬಿಸುವುದನ್ನು ಖಂಡಿಸಿ ಹಾಗೂ ದಲಿತರಿಗೆ ಮಂಜೂರಾಗಿರುವ ಭೂಮಿಯನ್ನು ಸರ್ಕಾರಗಳು ಕೈಗಾರಿಕೆಗಳ ಸ್ಥಾಪನೆಗಾಗಿ ವಿದೇಶಿ ಬಂಡವಾಳ ಗಾರರಿಗೆ ಭೂಮಿ ಕೊಡುತ್ತಿರುವುದರಿಂದ ದಲಿತರನ್ನು ಸಂಪೂರ್ಣವಾಗಿ ಭೂಮಿಯಿಂದ ಹೊರ ದಬ್ಬುವ ಕುತಂತ್ರವಾಗಿದೆ. ಈ ಬಗ್ಗೆ ಸರ್ಕಾರವನ್ನು ಎಚ್ಚರಿಸಲು ಇಂದು ಪ್ರಥಮ ಹಂತವಾಗಿ ಭೂಮಿ ಮಂಜೂರಾತಿ ಗಾಗಿ ಆಗ್ರಹಿಸಿ ಪ್ರತಿಭಟನೆ ಧರಣಿ ಹಮ್ಮಿಕೊಳ್ಳಲಾಗಿದೆ ಎಂದರು.

ಹಕ್ಕೋತ್ತಾಯಗಳು : ಬಗರ್ ಹುಕಂ ಸಾಗುವಳಿ ಕಾಲ ಮಿತಿಯೊಳಗೆ ಇತ್ಯರ್ಥಗೊಳಿಸಬೇಕು. ಪರಿಶಿಷ್ಟರ ಪಿ ಟಿ ಸಿ ಎಲ್ ಕಾಯ್ದೆಗೆ ರಾಜ್ಯ ಸರ್ಕಾರ ‘ತಂದಿರುವ ತಿದ್ದುಪಡಿಯನ್ನು ಮಾನ್ಯ ಮಾಡಬೇಕು, ಸುಳ್ಳಾಡಿ ವಿಷಪ್ರಸಾದ ದುರಂತದಲ್ಲಿ ಮೃತಪಟ್ಟಿ ರುವ ಮತ್ತು ಅಶ್ವಸ್ಥರಾಗಿರುವ ಕುಟುಂಬಗಳಿಗೆ ವಸತಿ ಮತ್ತು ಜಮೀನನ್ನು ಶೀಘ್ರವಾಗಿ ಮಂಜೂರು ಮಾಡಬೇಕು ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿರುವ ವಿದ್ಯಾರ್ಥಿ ನಿಲಯಗಳನ್ನು ಉನ್ನತೀಕರಣಗೊಳಿಸಬೇಕೆಂದು ಹಾಗೂ ಇನ್ನಿತರ ಮನವಿಗಳನ್ನು ಸಲ್ಲಿಸಲಾಯಿತು.

ಸುಳ್ಳಾಡಿ ಸಂತ್ರಸ್ತರಿಗೆ ನಿವೇಶನ ನೀಡಿ :
ಸುಳ್ಳಾಡಿ ವಿಷ ಪ್ರಸಾದ ದುರಂತದಲ್ಲಿ ಮಡಿದ ಸಂಬಂಧಿಕರಿಗೆ ನಿವೇಶನ ನೀಡಲು ಮುಂದಾಗಿದ್ದು ಆದಷ್ಟು ಬೇಗ ಅದು ಅರ್ಹ ಫಲಾನುಭವಿಗೆ ತಲುಪಬೇಕು ಎಂದು ಒತ್ತಾಯ ಮಾಡಿದರು. ಇದೆ ಸಂದರ್ಭದಲ್ಲಿ ಬೈರಾನತ್ತ ಮಾದೇಶ್‌, ಮಾರಿಯಪ್ಪ, ವೇಲು ಸ್ವಾಮಿ, ಮುರುಗೇಶ್, ಮುರುಗನ್, ಮಾದೇಶ್, ಶಿವಣ್ಣ, ನಾಗರಾಜು, ಜೈ ಗಣೇಶ್, ವೀರಪ್ಪ, ರಾಮಲಿಂಗಮ್ ಸೇರಿದಂತೆ ಅನೇಕ ಮಹಿಳೆಯರು ಇದ್ದರು.

ವರದಿ ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!