ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅನ್ಯ ಭಾಷೆಯಲ್ಲಿರುವ ಫಲಕಗಳನ್ನು ತೆರವುಗೊಳಿಸಲು ಒತ್ತಾಯ

ಬಾಗಲಕೋಟೆ ಜಿಲ್ಲೆ / ಕೂಡಲಸಂಗಮ :ಕರ್ನಾಟಕ ಗೋವಾ ಪ್ರಾoಚಿತ ಮಹೇಶ್ವರಿ ಯುವ ಸಂಘ ಇಲಕಲ್ಲ (ರಿ.) ಇವರು ಕೂಡಲಸಂಗಮದ ಸಭಾಭವನದಲ್ಲಿ ಮಹೇಶ್ವರಿ ಉತ್ಸವ ಕಾರ್ಯಕ್ರಮದಲ್ಲಿ ಆಂಗ್ಲ ಮತ್ತು ಹಿಂದಿ ಫಲಕ (ಬ್ಯಾನರ್) ಗಳನ್ನು ಹಾಕಿದ್ದು ಕಂಡು ಹೆಚ್. ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ ಕೂಡಲ ಸಂಗಮ ಗ್ರಾಮ ಘಟಕದ ಅಧ್ಯಕ್ಷರಾದ ಸಂಜಯಗೌಡ ಗೌಡರ ಮತ್ತು ಸೋಹೈಲ್ ಸುತಾರ ನೇತೃತ್ವದಲ್ಲಿ ಕಾರ್ಯಕರ್ತರೊಂದಿಗೆ ಕಾರ್ಯಕ್ರಮ ನಡೆದ ಸಭಾಂಗಣಕ್ಕೆ ಹೋಗಿ ಅನ್ಯ ಭಾಷೆಯಲ್ಲಿರುವ ಫಲಕಗಳನ್ನು ತೆರವುಗೊಳಿಸಿ ರಾಜ್ಯ ಸರ್ಕಾರದ ಆದೇಶದಂತೆ ಕನ್ನಡದಲ್ಲಿ ಫಲಕಗಳನ್ನು ಹಾಕಿದ ನಂತರವೇ ಕಾರ್ಯಕ್ರಮವನ್ನು ಆರಂಭಿಸಬೇಕೆಂದು ತಿಳಿಸಲಾಯಿತು.
ಹೆಚ್. ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ, ಕೂಡಲ ಸಂಗಮ ಗ್ರಾಮ ಘಟಕದ ಮುಖಂಡರ ಒತ್ತಾಯಕ್ಕೆ ಮಣಿದು ಕಾರ್ಯಕ್ರಮ ಆಯೋಜನೆ ಮಾಡಿದ ಸಂಘಟನೆಯ ಸದಸ್ಯರು ತಕ್ಷಣವೇ ಅನ್ಯ ಭಾಷೆಯ ಫಲಕಗಳನ್ನು ತೆರವುಗೊಳಿಸಿ ಕನ್ನಡ ಫಲಕಗಳನ್ನು ಅಳವಡಿಸಿ ಸ್ಪಂದಿಸಿದರು.

ಈ ಸಂದರ್ಭದಲ್ಲಿ ಶ್ರೀಶೈಲ ಹುದ್ದಾರ, ಶಂಕರ ಕುರಿ, ನಾಗೇಶಗಣಾಚಾರಿ, ತನ್ವೀರ ನದಾಫ್, ಮಣಿಕಂಠ ರೇವಡಿಹಾಳ, ವಿಕಾಸ ಚೌಧರಿ
ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ : ನಿಂಬಯ್ಯ ಕುಲಕರ್ಣಿ, ಬಾದಾಮಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!