ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಏಳುಹೆಡೆ ನಾಗಪ್ಪ ದೇವಸ್ಥಾನಕ್ಕೆ ದೇಣಿಗೆಯಾಗಿ ಕಾಣಿಕೆ ಪೆಟ್ಟಿಗೆ ಅರ್ಪಣೆ

ಬಳ್ಳಾರಿ/ ಕಂಪ್ಲಿ : ತಾಲೂಕು ಸಮೀಪದ ಬುಕ್ಕಸಾಗರ ಗ್ರಾಮದ ಐತಿಹಾಸಿಕ ಏಳುಹೆಡೆ ನಾಗಪ್ಪ ದೇವಸ್ಥಾನದಲ್ಲಿ ಬ್ಯಾಂಕ್ ಆಫ್ ಬರೋಡ ಬುಕ್ಕಸಾಗರ ಶಾಖೆಯಿಂದ ಬ್ಯಾಂಕಿನ 118ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಇಲ್ಲಿನ ದೇವಸ್ಥಾನಕ್ಕೆ ಕಾಣಿಕೆ ಪೆಟ್ಟಿಗೆಯನ್ನು ದೇಣಿಗೆಯಾಗಿ ನೀಡಲಾಯಿತು ( 12 ಸಾವಿರ ಮೌಲ್ಯದ ಕಾಣಿಕೆ ಪೆಟ್ಟಿಗೆ )
ಬ್ಯಾಂಕ್ ವ್ಯವಸ್ಥಾಪಕ ಚಂದ್ರಶೇಖರ ಮಾತನಾಡಿ, ಬ್ಯಾಂಕ್ ಆಫ್ ಬರೋಡಾ ಜಗತ್ತಿನಲ್ಲಿ ಪಸರಿಸಿದ್ದು, ಇತ್ತೀಚೆಗೆ ಕರ್ನಾಟಕದ ಬುಕ್ಕಸಾಗರ ಗ್ರಾಮದಲ್ಲಿ ಶಾಖೆ ತೆರೆಯುವ ಮೂಲಕ ಈ ಭಾಗದ ರೈತರ ಹಾಗೂ ಗ್ರಾಹಕರಿಗೆ ಸಾಲ ಸೌಲಭ್ಯಗಳು ದೊರಕಲಿವೆ. ಇಲ್ಲಿನ ಜನಸ್ನೇಹಿಯಾಗಿ ಕೆಲಸ ಮಾಡಲಾಗುತ್ತಿದೆ. ಹೆಚ್ಚಿನ ಮಟ್ಟದಲ್ಲಿ ಜನರು ಬ್ಯಾಂಕಿನ ವ್ಯವಹಾರ ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ಅರ್ಚಕ ವಿಶ್ವನಾಥಸ್ವಾಮಿ, ಗ್ರಾ. ಪಂ ಸದಸ್ಯ ಶಶಿಧರ್, ಬ್ಯಾಂಕ್ ಸಿಬ್ಬಂದಿಗಳಾದ ವಿನೋದ, ಹುಲುಗಪ್ಪ, ಪ್ರಹ್ಲಾದ್ ವಿರೇಶ ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!