ಬೆಂಗಳೂರು: ನಗರ ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಕರೆಯಲಾಗಿದ್ದ, ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರದ ಜಿಲ್ಲಾ ಉಸ್ತುವಾರಿ ಸಮಿತಿ ಸಭೆಯನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ. ಜಗದೀಶ ರವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರದ ಪ್ರಗತಿ ವರದಿ ಕ್ರಿಯಾಯೋಜನೆ ಹಾಗೂ ಸಲಕರಣೆಗಳ ಬಗ್ಗೆ ಚರ್ಚಿಸಿದರು.
ಇದೇ ಸಂದರ್ಭದಲ್ಲಿ ವಿಕಲಚೇತನ ಮಕ್ಕಳಿಗೆ ವೀಲ್ ಚೇರನ್ನು ಹಾಗೂ ಶ್ರವಣದೋಷ ಉಳ್ಳವರಿಗೆ ಕಿವಿ ಮಿಷಿನ್ ಅನ್ನು ನೀಡಲಾಯಿತು.
ಸಭೆಯಲ್ಲಿ ಬೆಂಗಳೂರು ನಗರ ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿಗಳಾದ ಕೃಷ್ಣಮೂರ್ತಿ, ಜಿಲ್ಲಾ ಸಾಮಾಜಿಕ ಭದ್ರತೆ ಮತ್ತು ಪಿಂಚಣಿಗಳ ನಿರ್ದೇಶನಾಲಯದ ಉಪ ನಿರ್ದೇಶಕರಾದ ಕೆ. ಲೀಲಾವತಿ, ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರದ ಸದಸ್ಯ ಕಾರ್ಯದರ್ಶಿಗಳಾದ ರಾಜು ಚಂದ್ರಶೇಖರ್, ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರದ ನೋಡಲ್ ಅಧಿಕಾರಿಗಳಾದ ಸವಿತಾ ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರದ ಸಿಬ್ಬಂದಿಗಳಾದ ಮಲ್ಲಿಕಾರ್ಜುನ್ ಹಿರೇಮಠ , ವೀಣಾ ಕೆ ಸೇರಿದಂತೆ ವಿವಿದ್ಧೋದ್ದೇಶ ಪುನರ್ವಸತಿ ಕಾರ್ಯಕರ್ತರು (ಎಂ ಆರ್ ಡಬ್ಲ್ಯೂ) ಮತ್ತು ಗ್ರಾಮ ಪುನರ್ವಸತಿ ಕಾರ್ಯಕರ್ತರು (ವಿ ಆರ್ ಡಬ್ಲ್ಯೂ) ಉಪಸ್ಥಿತರಿದ್ದರು.
ವರದಿ: ಕೊಡಕ್ಕಲ್ ಶಿವಪ್ರಸಾದ್



















