ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಚಂದ್ರಶೇಖರ್ ಆಜಾದ್ 119ನೇ ಜನ್ಮದಿನ

ವಿಶೇಷ ಲೇಖನ : ಜಿಲಾನಸಾಬ್ ಬಡಿಗೇರ

ಬ್ರಿಟಿಷ್ ಆಡಳಿತದ ವಿರುದ್ಧ ಹಾಗೂ ಸ್ವಾತಂತ್ರ್ಯಕ್ಕಾಗಿ ನಡೆದ ಹೋರಾಟದಲ್ಲಿ ಆಯುಧಗಳನ್ನು ಬಳಸಿದ ಮೊದಲ ಭಾರತೀಯ, ಕ್ರಾಂತಿಕಾರಿಗಳಲ್ಲಿ ಒಬ್ಬರಾಗಿರುವ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಚಂದ್ರಶೇಖರ್ ಆಜಾದ್ ಎಂದೇ ಖ್ಯಾತಿಗಳಿಸಿದ ಚಂದ್ರಶೇಖರ ಸೀತಾರಾಮ್ ತಿವಾರಿ ಅವರ 119ನೇ ಜನ್ಮದಿನ ಇಂದು.
ಆಜಾದ್ ಅವರು ಬ್ರಿಟಿಷರನ್ನು ಇನ್ನಿಲ್ಲದಂತೆ ಕಾಡಿದ್ದರು. ಉತ್ಸಾಹ ಮತ್ತು ದೇಶಭಕ್ತಿಯ ಹಾದಿಯಲ್ಲಿ ನಡೆಯಲು ಜನತೆಗೆ ಮಾರ್ಗದರ್ಶನವನ್ನು ನೀಡಿದ ಮಹಾನ್ ವ್ಯಕ್ತಿ ಆಜಾದ್​ ಅವರ ಜೀವನ ಚರಿತ್ರೆ ಹಾಗೂ ಆಸಕ್ತಿದಾಯಕ ವಿಚಾರಗಳ ಬಗ್ಗೆ ತಿಳಿದುಕೊಳ್ಳೋಣ…

ಚಂದ್ರಶೇಖರ್ ಆಜಾದ್ ಅವರು ಮಧ್ಯಪ್ರದೇಶದ ಭಾಬ್ರಾ ಎಂಬ ಸಣ್ಣ ಗ್ರಾಮದಲ್ಲಿ ಪಂಡಿತ್ ಸೀತಾರಾಮ್ ಮತ್ತು ಜಾಗ್ರಣಿ ದೇವಿ ದಂಪತಿಯ ಪುತ್ರನಾಗಿ 1906ರ ಜುಲೈ 23ರಂದು ಜನಿಸಿದರು. ಭಾವರಾ ಮತ್ತು ವಾರಾಣಸಿಯ ಸಂಸ್ಕೃತ ಪಾಠ ಶಾಲೆಯಲ್ಲಿ ವಿದ್ಯಾಭ್ಯಾಸವನ್ನು ಮುಂದುವರಿಸಿದ ಆಜಾದ್ ಅವರಿಗೆ ಸಣ್ಣ ವಯಸ್ಸಿನಲ್ಲೇ ಸ್ವಾತಂತ್ರ್ಯದ ಕಿಚ್ಚು ಹತ್ತಿಕೊಂಡಿತ್ತು. ಅದರಂತೆ ಸ್ವಾತಂತ್ರ್ಯ ಹೋರಾಟದಲ್ಲೂ ಧುಮುಕಿ ಚಳುವಳಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡರು.

ಆಜಾದ್ ಎಂಬ ಬಿರುದು ಬಂದಿದ್ದು ಹೇಗೆ?

ಅಮೃತಸರದಲ್ಲಿ 1919ರಲ್ಲಿ ನಡೆದ ಜಲಿಯನ್​ವಾಲಾ ಬಾಗ್ ಹತ್ಯಾಕಾಂಡ ಘಟನೆ ಬಗ್ಗೆ ನಿಮಗೆಲ್ಲರಿಗೂ ತಿಳಿದೇ ಇದೆ. ಈ ಘಟನೆಯಿಂದ ತೀವ್ರವಾಗಿ ಜರ್ಜರಿತರಾದ ಚಂದ್ರಶೇಖರ್ ಅವರು 1921ರಲ್ಲಿ ಗಾಂಧೀಜಿಯವರು ಹಮ್ಮಿಕೊಂಡ ಅಸಹಕಾರ ಚಳುವಳಿಯಲ್ಲಿ ಸಕ್ರಿಯರಾಗಿ ಪಾಲ್ಗೊಂಡರು. ಈ ರೀತಿಯ ನಾಗರಿಕ ಶಾನಸಭಂಗ ಅಥವಾ ಅವಿಧೇಯತೆಗಾಗಿ ಅವರು ಬಂಧಿತರಾಗಿ ತಮ್ಮ 15ನೇ ವಯಸ್ಸಿನಲ್ಲಿಯೇ ಶಿಕ್ಷೆಗೆ ಗುರಿಯಾದರು. ನ್ಯಾಯಾಧೀಶರು ಹೆಸರೇನು ಎಂದು ಕೇಳಿದಾಗ ಆಜಾದ್ (ಸ್ವಾತಂತ್ರ್ಯ ಅಥವಾ ಸ್ವತಂತ್ರ ವ್ಯಕ್ತಿ ಎಂದು ಅರ್ಥ) ಎಂದು ಹೇಳಿದರು. ಇದೇ ಕಾರಣಕ್ಕೆ ಅವರಿಗೆ 15 ಛಡಿ ಏಟುಗಳ ಶಿಕ್ಷೆಯನ್ನು ನೀಡಲಾಯಿತು.

ಛಡಿ ಏಟುಗಳ ನಡುವೆ ಚಂದ್ರಶೇಖರ್ ಅವರು ಭಾರತ್ ಮಾತಾ ಕಿ ಜೈ ಎಂಬ ಘೋಷಣೆಗಳನ್ನು ಕೂಗುತ್ತಿದ್ದರು. ಪ್ರತಿ ಛಡಿ ಏಟುಗಳಿಗೂ ಅದೇ ಘೋಷಣೆಗಳನ್ನು ಕೂಗಿದರು. ಈ ಘಟನೆಯ ನಂತರ ಚಂದ್ರಶೇಖರ್ ಅವರಿಗೆ ಆಜಾದ್ ಎಂಬ ಬಿರುದು ಪ್ರಾಪ್ತವಾಯಿತು. ಅದರಂತೆ ಚಂದ್ರಶೇಖರ್ ಸೀತಾರಾಮ್ ತಿವಾರಿ ಅವರು ಚಂದ್ರಶೇಖರ್ ಅಜಾದ್ ಆಗಿ ಗುರುತಿಸಲ್ಪಟ್ಟರು.

ಭಾರತದಾದ್ಯಂತ ಹಲವಾರು ಶಾಲೆಗಳು, ಕಾಲೇಜುಗಳು, ರಸ್ತೆಗಳು ಮತ್ತು ಇತರ ಸಾರ್ವಜನಿಕ ಸಂಸ್ಥೆಗಳಿಗೆ ಆಜಾದ್ ಅವರ ಹೆಸರಿಡಲಾಗಿದೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!