ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

“ತಾಲೂಕು ಆಡಳಿತ ವತಿಯಿಂದ ಗಣರಾಜ್ಯೋತ್ಸವ ಆಚರಣೆ”

ಹನೂರು: ಅಖಂಡ ಭಾರತದ ಆಡಳಿತಕ್ಕೆ ಅಗತ್ಯವಾದ ಸೂಕ್ತ ಸಂವಿಧಾನವನ್ನು ದೇಶಕ್ಕೆ ಅರ್ಪಿಸಿದ ದಿನದ ಸವಿ ನೆನಪಿಗಾಗಿ ಪ್ರತಿ ವರ್ಷ ಜನವರಿ 26 ರಂದು ಗಣರಾಜ್ಯೋತ್ಸವ ದಿನಾಚರಣೆ ಮಾಡಲಾಗುತ್ತದೆ ಎಂದು ತಹಸೀಲ್ದಾರ್ ಆನಂದಯ್ಯ ತಿಳಿಸಿದರು.

ತಾಲ್ಲೋಕು ಆಡಳಿತ ಹಾಗೂ ರಾಷ್ಟೀಯ ಹಬ್ಬಗಳ ಆಚರಣಾ ಸಮಿತಿ ಹನೂರು ತಾಲೂಕು ವತಿಯಿಂದ ಪಟ್ಟಣದ ಮಹದೇಶ್ವರ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 74 ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರು ಕರಡು ಸಮಿತಿಯ ಅಧ್ಯಕ್ಷರಾಗಿ 2 ವರ್ಷ 11ತಿಂಗಳು 18 ದಿನಗಳ ಕಾಲ, ವಿವಿಧ ದೇಶಗಳ ಸಂವಿಧಾನ ಅಧ್ಯಯನ ಮಾಡಿ, ಸುರರು ಸಭೆ ಮಾಡಿ ಪರಿಶೀಲನೆ ಮಾಡಿ ಸತತ ಪರಿಶ್ರಮದ ಮೂಲಕ ಸಂವಿಧಾನವನ್ನು ರಚಿಸಿ ಅಖಂಡ ಭಾರತಕ್ಕೆ ಅರ್ಪಿಸಿದ್ದಾರೆ.

ಸಂವಿಧಾನದಲ್ಲಿ ಪೂರ್ವ ಪೀಠಿಕೆಯು ಸಂವಿಧಾನ ದಿಕ್ಸೂಚಿಯಾಗಿದೆ. ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತವು 74ನೇ ಗಣರಾಜ್ಯೋತ್ಸವವನ್ನು ಇಂದು ಆಚರಿಸಲಾಗುತ್ತಿದೆ. ದೇಶದ ಪ್ರತಿಯೊಬ್ಬ ಪ್ರಜೆಯೂ ಸಮಾನವಾಗಿ ಬದುಕುವ ಹಕ್ಕು ಮತ್ತು ಸ್ವಾತಂತ್ರ್ಯವನ್ನು ಸಂವಿಧಾನವು ನೀಡಿದೆ. ಇದೇ ಆಶಯಗಳೊಂದಿಗೆ ದೇಶ ಮುನ್ನಡೆಯುತ್ತಿದೆ. ಆದ್ದರಿಂದ ದೇಶದ ಪ್ರತಿಯೊಬ್ಬ ನಾಗರಿಕರೆಲ್ಲರೂ ಸಂವಿಧಾನವನ್ನು ಗೌರವಿಸಬೇಕು ಎಂದು ತಿಳಿಸಿದರು.

ಪಟ್ಟಣದ ವಿವಿಧ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರೀಯ ಭಾವೈಕ್ಯತೆ ಮತ್ತು ದೇಶಭಕ್ತಿ ಸಾರುವ ಹಾಡುಗಳಿಗೆ ಆಕರ್ಷಕ ನೃತ್ಯ ಮಾಡುವ ಮೂಲಕ ಪ್ರೇಕ್ಷಕರಿಗೆ ಮನರಂಜನೆ ನೀಡಿದರು. ನೃತ್ಯ ಮಾಡಿದ ಶಾಲಾ ಮಕ್ಕಳಿಗೆ ನೆನಪಿನ ಕಾಣಿಕೆ ನೀಡುವ ಮೂಲಕ ಗೌರವಿಸಲಾಯಿತು.

ಗ್ರಾಮ ಒನ್ ಕೇಂದ್ರದಲ್ಲಿ ಸ್ಥಳೀಯ ಸಾರ್ವಜನಿಕರಿಗೆ ಉತ್ತಮ ಸೇವೆ ಸಲ್ಲಿಸಿರುವ ಕಂಪ್ಯೂಟರ್ ಆಪರೇಟರ್ ಗಳಾದ ಹುತ್ತೂರಿನ ಸೋಮಣ್ಣ, ಗೋಪಿನಾತಂ ಆನಂದನ್ ಮತ್ತು ಲೋಕ್ಕನಹಳ್ಳಿಯ ರಮೇಶ್ ರವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಗ್ರೇಡ್ 2 ತಹಶೀಲ್ದಾರ್ ಧನಂಜಯ,  ತಾಲೂಕು ಪಂಚಾಯಿತಿ ಇ.ಒ ಶ್ರೀನಿವಾಸ್, ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜು, ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಮೂರ್ತಿ, ಶಿರಸ್ತೇದಾರ್ ನಾಗೇಂದ್ರ, ರಾಜಶ್ವ ನಿರೀಕ್ಷಕರಾದ ಮಹಾದೇವಸ್ವಾಮಿ, ಮಾದೇಶ್, ಗ್ರಾಮ ಲೆಕ್ಕಾಧಿಕಾರಿ ಶೇಷಣ್ಣ, ಹಾಗೂ ವಿವಿಧ ಶಾಲೆಯ ಶಿಕ್ಷಕರು , ವಿದ್ಯಾರ್ಥಿಗಳು ಹಾಜರಿದ್ದರು.
ವರದಿ ಉಸ್ಮಾನ್ ಖಾನ್.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ