ಬಳ್ಳಾರಿ/ ಕಂಪ್ಲಿ : ತಾಲೂಕಿನ ಎಮ್ಮಿಗನೂರ ಗ್ರಾಮದ ಶ್ರೀ ಜಡೆ ಸಿದ್ದೇಶ್ವರ ಎಜುಕೇಶನಲ್ ಟ್ರಸ್ಟ್ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಆಚರಿಸಲಾಯಿತು.
ಈ ವೇಳೆ ಟ್ರಸ್ಟ್ ನ ಅಧ್ಯಕ್ಷ ಶಿವನೇಗೌಡರ ರಾಮಪ್ಪ ಮಾತನಾಡಿ ಕಾರ್ಗಿಲ್ ಯುದ್ಧ ನಡೆದು 27 ವರ್ಷಗಳ ಆದರೂ ಕೂಡ ಇಂದಿಗೂ ಕೂಡಾ ಅಚ್ಚಳಿಯದೆ ಪ್ರತಿಯೊಬ್ಬರ ನೆನಪಿನಲ್ಲಿ ಉಳಿಯುವಂತದ್ದು ಪ್ರಸ್ತುತ ದಿನಮಾನಗಳಲ್ಲಿ ಯುವಕರು ದೇಶಾಭಿಮಾನ ಬೆಳೆಸಿಕೊಳ್ಳುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.
ಈ ಸಂದರ್ಭದಲ್ಲಿ ಟ್ರಸ್ಟಿನ ಪದಾಧಿಕಾರಿಗಳು ಸೇರಿದಂತೆ ಮಕ್ಕಳು ಇತರರು ಇದ್ದರು.
ವರದಿ : ಜಿಲಾನಸಾಬ್ ಬಡಿಗೇರ



















