ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ದಂಡೋತಿ ಗ್ರಾಮದಲ್ಲಿ ಎರಡು ಮನೆಗಳ ಗೋಡೆ ಕುಸಿತ; ತಪ್ಪಿದ ಭಾರಿ ಅನಾಹುತ

ಕಲಬುರಗಿ/ ಚಿತ್ತಾಪುರ : ಕಳೆದ ಕೆಲ ದಿನಗಳಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ತಾಲೂಕಿನ ದಂಡೋತಿ ಗ್ರಾಮದಲ್ಲಿ ಎರಡು ಮನೆಗಳ ಗೋಡೆ ಕುಸಿದು ಬಿದ್ದು ಅಪಾರ ಹಾನಿಯಾಗಿದ್ದು, ಯಾವುದೇ ಸಾವು ನೋವು ಆಗಿಲ್ಲ ಎಂದು ತಿಳಿದು ಬಂದಿದೆ.
ಮಹ್ಮದ್ ರಫೀಕ್ ರಸೂಲ್ ಸಾಬ್ ಡೋಂಗಾ ಹಾಗೂ ಪುಥಲಿ ಬೇಗಂ ಹುಸೇನ್ ಸಾಬ್ ಡೋಂಗಾ ಎನ್ನುವವರ ಮನೆಯ ಗೋಡೆ ಕುಸಿದು ಬಿದ್ದಿದೆ.

ನಂತರ ಕ. ರ. ವೇ ದಂಡೋತಿ ಗ್ರಾಮ ಘಟಕ ಅಧ್ಯಕ್ಷ ಮೈನೋದ್ದೀನ್ ಮಾತನಾಡಿ, ಕಳೆದ ಕೆಲವು ದಿನಗಳಿಂದ ಬಿಟ್ಟು ಬೀಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ದಂಡೋತಿ ಗ್ರಾಮದಲ್ಲಿ ನಿನ್ನೆ ರಾತ್ರಿ ಎರಡು ಗಂಟೆ ಸುಮಾರಿಗೆ ಎರಡು ಮನೆಗಳ ಗೋಡೆ ಕುಸಿದು ಬಿದ್ದಿದೆ. ಮನೆಯಲ್ಲಿನ ಅಡುಗೆ ಸಾಮಾನು, ಗ್ಯಾಸ್, ಕುಲರ್, ಫ್ರಿಡ್ಜ್, ಟಿ.ವಿ, ತೊಗರಿ ಬೆಳೆ, ಕಡ್ಲಿ ಬೆಳೆ, ಉದ್ದು ಸೇರಿದಂತೆ ಒಟ್ಟು 3 ಲಕ್ಷ ರೂ.ಯಷ್ಟು ಹಾನಿ ಸಂಭವಿಸಿದೆ.
ಕೂಡಲೇ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಸಂಬಂಧ ಪಟ್ಟ ಅಧಿಕಾರಿಗಳು ಸರ್ಕಾರದಿಂದ ಪರಿಹಾರ ಕೊಡಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಅವರು ಮನವಿ ಮಾಡಿದರು.

ಸುದ್ದಿ ತಿಳಿಯುತ್ತಿದ್ದಂತೆ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವರದಿ ಮೊಹಮ್ಮದ್ ಅಲಿ, ಚಿತ್ತಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!