ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕ್ರಾಂತಿಕಾರಿ ಬಣದ ಗುರುಮಠಕಲ್ ತಾಲೂಕಿನ ಪದಾಧಿಕಾರಿಗಳ ಆಯ್ಕೆ

ಸಂಚಾಲಕರಾಗಿ ಆನಂದ ಭಜಂತ್ರಿ ನೇಮಕ.

ಯಾದಗಿರಿ/ಗುರುಮಠಕಲ್: ತಾಲೂಕಿನ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳ ಆಯ್ಕೆ ನಿನ್ನೆ (ಜುಲೈ ೨೭) ರಂದು ಜರುಗಿತು. ಈ ಸಭೆಯ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಸಂಘಟನಾ ಚಾಲಕರಾದ ಮಲ್ಲಿಕಾರ್ಜುನ್ ಕ್ರಾಂತಿಕಾರಿ ಅವರು ವಹಿಸಿದ್ದರು, ಮುಖ್ಯ ಅತಿಥಿಗಳಾಗಿ ದಲಿತ ಚಳುವಳಿಯ ಬೆನ್ನೆಲುಬು ಹಾಗೂ ನಿವೃತ್ತ ಪ್ರೊಫೆಸರ್ ಮಾನು ಹರಿಕಾರ, ರಾಜ್ಯ ಸಮಿತಿ ಜಿಲ್ಲಾ ಮುಖಂಡರಾದ ಮಲ್ಲಿಕಾರ್ಜುನ್ ತಳ್ಳಳ್ಳಿ ಸೇರಿದಂತೆ ಅನೇಕ ಮುಖಂಡರು ಭಾಗವಹಿಸಿ ತಾಲೂಕಿನ ಪದಾಧಿಕಾರಿಗಳ ಆಯ್ಕೆ ಮಾಡಿದರು.
ತಾಲೂಕಿನ ಸಂಚಾಲಕರಾಗಿ ಆನಂದ ಭಜಂತ್ರಿ ಗೋಪಾಲಾಪುರ, ಸಹ ಸಂಚಾಲಕರಾಗಿ ಅಂಜನೇಯ ಯಲ್ಹೇರಿ, ರಘು ಪರಮೇಶ್ ಪಲ್ಲಿ, ವೆಂಕಟೇಶ್ ಜೈ ಗ್ರಾಮ, ಕಾಶೀನಾಥ್ ಪರಮೇಶ್ ಪಲ್ಲಿ, ಇನ್ನು ಖಜಾಂಚಿಯಾಗಿ ಮೌನೇಶ್ ಗೋಪಾಲಪುರ ಅವರಿಗೆ ಜವಾಬ್ದಾರಿ ನೀಡಲಾಗಿದೆ.

ಈ ಸಂದರ್ಭದಲ್ಲಿ ರವಿಚಂದ್ರ ಬಮ್ಮನಹಳ್ಳಿ, ಭೀಮಣ್ಣ ಪೂಜಾರಿ, ರಂಗಸ್ವಾಮಿ, ನಾಗಪ್ಪ ಅರಿಕೇರಾ,ಇನ್ನಿತರರು ಉಪಸ್ಥಿತರಿದ್ದರು.

ವರದಿ: ಜಗದೀಶ್ ಕುಮಾರ್ ಭೂಮಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!