ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಗ್ರಾಮ ಪಂಚಾಯತಿ ಕಾರ್ಯದರ್ಶಿ ವೀರಭದ್ರಯ್ಯ ಅವರನ್ನು ವರ್ಗಾವಣೆ ಮಾಡಬೇಕೆಂದು ಆಗ್ರಹ

ಬಳ್ಳಾರಿ / ಕಂಪ್ಲಿ : ಇಲ್ಲಿನ ನಂ.10 ಮುದ್ದಾಪುರ ಗ್ರಾಮ ಪಂಚಾಯತಿಯಲ್ಲಿ ಐದು ವರ್ಷಕ್ಕೂ ಹೆಚ್ಚು ಕಾಲ ಸೇವೆ ಸಲ್ಲಿಸುತ್ತಿರುವ ಗ್ರಾಮ ಪಂಚಾಯತಿ ಕಾರ್ಯದರ್ಶಿ ವೀರಭದ್ರಯ್ಯ ಅವರನ್ನು ಸರ್ಕಾರದ ನಿಯಮದಂತೆ ಕಡ್ಡಾಯವಾಗಿ ವರ್ಗಾವಣೆ ಮಾಡಬೇಕೆಂದು ಡಾ. ಬಿ.ಆರ್. ಅಂಬೇಡ್ಕರ್ ದಲಿತ ಸಂಘದ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.

ಈ ಕುರಿತು ಸಂಘದ ಅಧ್ಯಕ್ಷ ಕೆ. ರಾಮಕೃಷ್ಣ ಹಾಗೂ ಕಾರ್ಯದರ್ಶಿ ದೊಡ್ಡ ಬಸವರಾಜ್ ಬಡಗಿ ಅವರು 27.07.2025 ರಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ “ಕರ್ನಾಟಕ ರಾಜ್ಯಪಾಲರ ಆದೇಶ ಮತ್ತು ಅವರ ಹೆಸರಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿರ್ದೇಶಕರಾದ ಡಾ. ಎನ್. ಸೋಮೇಶ್ ಕುಮಾರ್ ನಿರ್ದೇಶನದಂತೆ, ಐದು ವರ್ಷಗಳಿಂದ ಒಂದೇ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳನ್ನು ಬೇರೆ ಕಡೆ ಕಡ್ಡಾಯವಾಗಿ ವರ್ಗಾವಣೆ ಮಾಡಬೇಕಾಗಿದೆ. ”

2024ರಲ್ಲಿ ಜಾರಿಗೆ ಬಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ತಿದ್ದುಪಡಿ ನಿಯಮಗಳು ಈ ವಿಷಯಕ್ಕೆ ಆಧಾರವಾಗಿದ್ದು, ಈಗಲೂ ವೀರಭದ್ರಯ್ಯ ಅವರು ಒಂದೇ ಹುದ್ದೆಯಲ್ಲಿ ಸೇವೆ ನೀಡುತ್ತಿರುವುದರಿಂದ, ಸರ್ಕಾರದ ಆದೇಶವನ್ನು ಪಾಲಿಸಲು ಅವರು ಸ್ಥಳಾಂತರಗೊಳ್ಳಬೇಕೆಂದು ಸಂಘದ ವತಿಯಿಂದ ಒತ್ತಾಯಿಸಲಾಯಿತು.

ಸಂಘದ ಪದಾಧಿಕಾರಿಗಳು ಸಂಬಂಧಪಟ್ಟ ಮೆಲಾಧಿಕಾರಿಗಳಿಗೆ ಮನವಿ ಸಲ್ಲಿಸುವುದಾಗಿ ತಿಳಿಸಿ, ಈ ಕ್ರಮ ಜನಹಿತದ ದೃಷ್ಟಿಯಿಂದ ಅತ್ಯಂತ ಅಗತ್ಯ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕೆ. ರಾಮಕೃಷ್ಣ – ಸಂಘದ ಅಧ್ಯಕ್ಷ, ನಬೀ ಸಾಬ್ – ಉಪಾಧ್ಯಕ್ಷ, ದೊಡ್ಡ ಬಸವರಾಜ್ ಬಡಗಿ – ಕಾರ್ಯದರ್ಶಿ, ನಾಯಕರ ನಾಗರಾಜ್ – ಸಂಘಟನಾ ಕಾರ್ಯದರ್ಶಿ, ಬಡಿಗೆ ಓಂಕಾರಿ, ಹರಿಜನ ವೆಂಕಟೇಶ, ಹರಿಜನ ರೇಣುಕಪ್ಪ, ಪಲ್ಲಕ್ಕಿ ವೆಂಕಟೇಶ್ಹ, ಹರಿಜನ ಹುಲ್ಗಪ್ಪ, ಪಲ್ಲಕ್ಕಿ ಪರಶುರಾಮ, ಹರಿಜನ ಮಲ್ಲಿಕಾರ್ಜುನ, ರಿಯಾಜ್ ಹಾಜರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!