
ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮುದೇನೂರು ಸರಕಾರಿ ಪ್ರೌಢ ಶಾಲೆಗೆ ಇಂದು ನೂತನವಾಗಿ ಎಸ್ ಡಿ ಎಂ ಸಿ ಯನ್ನು ರಚನೆ ಮಾಡಲಾಯಿತು. ನೂತನ ಅಧ್ಯಕ್ಷರಾಗಿ ಸುರೇಶ್ ಸಮತರ್ ಅವರು ಆಯ್ಕೆಯಾದರು. ಈ ಸಂದರ್ಭದಲ್ಲಿ ನೂತನ ಎಸ್ ಡಿ ಎಂ ಸಿ ಸದಸ್ಯರಿಗೆ ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಹಾಗೂ ಗ್ರಾಮದ ನಾಗರಿಕರಿಂದ ಸನ್ಮಾನಿಸಲಾಯಿತು. ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಸುರೇಶ್ ಸಮತರ್ ಮಾತನಾಡಿ ಗ್ರಾಮದ ಎಲ್ಲರ ಸಹಕಾರದೊಂದಿಗೆ ನಮ್ಮ ಶಾಲೆಯನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತೇನೆಂದು ಹೇಳಿದರು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀ ವಸಂತ್ ಮಾಧವ್ ಹಾಗೂ ಸಹ ಶಿಕ್ಷಕರು ಮತ್ತು ಗ್ರಾಮದ ನಾಗರಿಕರು ಪಾಲ್ಗೊಂಡಿದ್ದರು.
- ಕರುನಾಡ ಕಂದ



















