ಬೆಂಗಳೂರು :ನಗರದ ಆನಂದರಾವ್ ವೃತ್ತದ ಬಳಿಯಿರುವ ಕರ್ನಾಟಕ ವಿದ್ಯುಚ್ಛಕ್ತಿ ನಿಗಮ ಲೆಕ್ಕಾಧಿಕಾರಿಗಳ ಸಂಘದ ಬೆಳ್ಳಿ ಭವನದಲ್ಲಿ ದಿನಾಂಕ 10-8-2025 ಎರಡನೇ ರವಿವಾರ ಬೆಳಗ್ಗೆ 10 ಗಂಟೆಯಿಂದಸ್ವಸ್ಥ ಆರೋಗ್ಯಕ್ಕೆ ಸ್ವಸ್ಥ ಬಾಯಿ ಕುರಿತು ಖ್ಯಾತ ವೈದ್ಯೆ, ಲೇಖಕಿ, ಈಜುಪಟು,
ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹಾಯಕ ಕುಲಸಚಿವರಾದ ಡಾ.ದೀಪಾ ವಿ. ಅವರಿಂದ ಆರೋಗ್ಯ ಸಲಹೆ ಕಾರ್ಯಕ್ರಮವಿದ್ದು ಶ್ರೀ ಕೊಡಕ್ಕಲ್ ಶಿವಪ್ರಸಾದ್, ಸಂಸ್ಥಾಪಕ ಅಧ್ಯಕ್ಷ, ಇಂಡಿಯನ್ ದಿವ್ಯಾಂಗ ಎಂಪವರ್ಮೆಂಟ್ ಅಸೋಸಿಯೇಷನ್ (ರಿ.), ಶಿವಮೊಗ್ಗ ಇವರು ಅಧ್ಯಕ್ಷತೆ ವಹಿಸುವರು.
ಹಿರಿಯರು ಹಾಗೂ 83 ರ ಹರಯದ, ಸುಮಾರು 300-400 ಕ್ಕೂ ಹೆಚ್ಚು ಕೃತಿ ರಚಿಸಿರುವ ಸಾಹಿತಿಗಳಾದ
ಶಾ.ಮಂ ಕೃಷ್ಣರಾಯ ಹಾಗೂ ಡಾ.ಬಿ ಸಿದ್ದಲಿಂಗ ಸ್ವಾಮಿ ಅವರಿಗೆ ಸನ್ಮಾನ ಕಾರ್ಯಕ್ರಮದ ಜೊತೆಗೆ ಬಳ್ಳಾರಿಯ ನಟರಾಜ-ಸನ್ನಿಧಿ ಅವರಿಂದ ಸುಗಮ ಸಂಗೀತ ಕಾರ್ಯಕ್ರಮ ಇದೇ ಸಂದರ್ಭದಲ್ಲಿ ಆಯೋಜಿಸಿರುತ್ತದೆ.
ಸಾರ್ವಜನಿಕರಿಗೆ ಮುಕ್ತ ಪ್ರವೇಶವಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕಾರ್ಯಕ್ರಮ ಸಂಯೋಜಕ ಶ್ರೀ ವಿಶ್ವೇಶ್ವರ ಗಾಯತ್ರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಕರುನಾಡ ಕಂದ



















