ಭದ್ರಾವತಿ: ಕಡದಕಟ್ಟೆಯಲ್ಲಿ ತಾಲ್ಲೂಕು ಆಡಳಿತದಿಂದ ಬಸ್ ನಿಲ್ದಾಣ ನಿರ್ಮಿಸುವಂತೆ ಒತ್ತಾಯಿಸಿ ಶನಿವಾರ ಮನವಿ ಸಲ್ಲಿಸಲಾಯಿತು.
ಕಡದಕಟ್ಟೆಯಲ್ಲಿ ರೈಲ್ವೆ ಮೇಲ್ಸೇತುವೆ ಉದ್ಘಾಟನೆ ಆಗಿರುವುದರಿಂದ ಸ್ಥಳೀಯ ಸಾರ್ವಜನಿಕರಿಗೆ ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಬಸ್ ತಂಗುದಾಣ ಇಲ್ಲದೆ ಇರುವುದು ತೀವ್ರ ತೊಂದರೆ ಆಗುತ್ತಿದ್ದು ಸಾರ್ವಜನಿಕರ ಅನುಕೂಲಕ್ಕಾಗಿ ಕಡದಕಟ್ಟೆಯಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಬಸ್ ಸ್ಟ್ಯಾಂಡ್ ನಿರ್ಮಿಸುವಂತೆ ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಗೌಡ ಗ್ರೇಡ್ 2 ತಹಶೀಲ್ದಾರ್ ಮಂಜಾನಾಯ್ಕ ರವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಟ್ಟೋಜಿ ಹನುಮಂತಪ್ಪ, ಶ್ರೀನಿವಾಸ್ ಮುಂತಾದವರು ಪಾಲ್ಗೊಂಡಿದ್ದರು.
ವರದಿ ಕೆ. ಆರ್. ಶಂಕರ್



















