ಬಳ್ಳಾರಿ / ಕಂಪ್ಲಿ : ಪಟ್ಟಣದ 19ನೇ ವಾರ್ಡಿನ ದ್ಯಾವಮ್ಮ ದೇವಿ ದೇವಸ್ಥಾನದ ಹತ್ತಿರ ಇರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇವಾ ಕೇಂದ್ರದಲ್ಲಿ ಮಹಿಳೆಯರಿಗೆ ಸರಕಾರಿ ಸೌಲಭ್ಯಗಳ ಕುರಿತು ಜಾಗೃತಿ ಕಾರ್ಯಕ್ರಮ ಸೋಮವಾರ ಜರಗಿತು.
ಮೇಲ್ವಿಚಾರಕ ಮಂಜುನಾಥ ಮಾತನಾಡಿ ಪ್ರತಿಯೊಬ್ಬ ಮಹಿಳೆಯರು ಸಂಸ್ಥೆಯಿಂದ ದೊರೆಯುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ಆರ್ಥಿಕವಾಗಿ ಪ್ರಗತಿ ಹೊಂದಬೇಕು ಎಂದು ತಿಳಿಸಿದರು.
ನಂತರ ಎಮ್ಮಿಗನೂರು ಸರಕಾರಿ ಶತಮಾನ ಶಾಲೆಯ ಶಿಕ್ಷಕ ಹಾಗೂ ಸಂಪನ್ಮೂಲ ವ್ಯಕ್ತಿ ಎಸ್. ರಾಮಪ್ಪ ಮಾತನಾಡಿ ಪ್ರಸ್ತುತ ದಿನಮಾನಗಳಲ್ಲಿ ಸರ್ಕಾರ ಮಹಿಳೆಯರ ಹಿತ ದೃಷ್ಟಿಯಿಂದ ಸ್ತ್ರೀ ಶಕ್ತಿ, ಗೃಹಲಕ್ಷ್ಮಿ, ಭಾಗ್ಯಲಕ್ಷ್ಮಿ, ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು ಅವುಗಳ ಬಗ್ಗೆ ಚೆನ್ನಾಗಿ ಅರಿತುಕೊಂಡು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುವ ಮೂಲಕ ಪ್ರಗತಿಯನ್ನು ಹೊಂದಬೇಕು ಅಲ್ಲದೆ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಸರ್ಕಾರ ಹೆಚ್ಚು ಒತ್ತು ಕೊಟ್ಟಿದ್ದು ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು ಎಂದರು.
ಈ ಸಂದರ್ಭದಲ್ಲಿ ಸಮನ್ವಯಾಧಿಕಾರಿ ರೇಖಾ ಒಕ್ಕೂಟದ ಅಧ್ಯಕ್ಷ ಲಕ್ಷ್ಮಮ್ಮ ಸೇವಾ ಪ್ರತಿನಿಧಿ ಗಂಗಮ್ಮ ಸೇರಿದಂತೆ ಸಂಘದ ಮಹಿಳೆಯರು ಸದಸ್ಯರು ಇತರರು ಉಪಸ್ಥಿತರಿದ್ದರು.
ವರದಿ : ಜಿಲಾನಸಾಬ್ ಬಡಿಗೇರ್



















