ಕಾವೇರಿ ನದಿಯಿಂದ ಗುಡಿಹಟ್ಟಿ ವೆಂಕಟರಮಣ ಸ್ವಾಮಿ ಬೂದುಬಾಳು ಗ್ರಾಮದ ಕೆರೆಗೆ ನೀರು ತುಂಬಿಸುವಂತೆ ಗ್ರಾಮಸ್ಥರು ಶಾಸಕ ಎಂ. ಆರ್. ಮಂಜುನಾಥ್ ಅವರನ್ನು ಒತ್ತಾಯಿಸಿದರು.
ಬೂದುಬಾಳು ಡೆಲಿವರಿ ಚೇಂಬರ್ ಚಾನೆಲ್ ನ ಬಳಿ ನಡೆಯುತ್ತಿರುವ ಪೈಪ್ ಲೈನ್ ಕಾಮಗಾರಿಯನ್ನು ಪರಿಶೀಲನೆ ನಡೆಸಿ ತ್ವರಿತ ಗತಿಯಲ್ಲಿ ಈ ಕೆಲಸವನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸೂಚಿಸಿದರು.
ಹನೂರು ತಾಲೂಕಿನ ಗುಡಿ ಹಟ್ಟಿ ಬೂದುಬಾಳು ಗ್ರಾಮದಲ್ಲಿರುವ ಕೆರೆಗೆ ಕಾವೇರಿ ನದಿಯಿಂದ ನೀರು ತುಂಬಿಸುವ ಯೋಜನೆಯನ್ನು ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಶಾಸಕರಿಗೆ ಮನವಿ ಸಲ್ಲಿಸಿದರು.
ಶ್ರೀ ಕ್ಷೇತ್ರ ಗುಡಿಹಟ್ಟಿ ವೆಂಕಟರಮಣ ಸ್ವಾಮಿ ದೇವಾಲಯಕ್ಕೆ ಬರುವ ಭಕ್ತಾದಿಗಳಿಗೆ ಹಾಗೂ ಗ್ರಾಮದ ಜನ ಜಾನುವಾರುಗಳಿಗೆ ಮಳೆ ಇಲ್ಲದೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿರುವುದರಿಂದ ಗ್ರಾಮದ ಕೆರೆಗೆ ಕಾವೇರಿ ನದಿಯಿಂದ ನೀರನ್ನು ತುಂಬಿಸುವ ಮೂಲಕ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಶಾಸಕರಿಗೆ ಮನವಿ ಸಲ್ಲಿಸಿದರು.
ಭರವಸೆ :
ಶಾಸಕ ಎಂ. ಆರ್. ಮಂಜುನಾಥ್ ಮಾತನಾಡಿ ತಾಲೂಕಿನಲ್ಲಿ ಮುಂಗಾರು ಮಳೆ ಕ್ಷೀಣಿಸಿರುವುದರಿಂದ ಗ್ರಾಮಗಳಲ್ಲಿ ಕುಡಿಯುವ ನಿನ್ನ ಸಮಸ್ಯೆ ಉಂಟಾಗುತ್ತಿದೆ ಇದನ್ನು ಮನಗಂಡು ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ ಹೀಗಾಗಿ ಗ್ರಾಮಸ್ಥರು ನನ್ನ ಮೇಲೆ ಇಟ್ಟಿರುವ ಭರವಸೆಯನ್ನು ಹುಸಿಗೊಳಿಸದೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಇದೇ ವೇಳೆಯಲ್ಲಿ ನೀರಾವರಿ ಇಲಾಖೆ ಎ. ಇ. ಇ ರಾಮಕೃಷ್ಣ, ಕರುಣಾಮಯಿ, ಎ. ಇ ಬಸವೇಶ್, ಬೂದುಬಾಳು ಹಾಗೂ ವಿವಿಧ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.
ವರದಿ ಉಸ್ಮಾನ್ ಖಾನ್



















