ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪ್ರತಿ ತಿಂಗಳು 5ನೇ ತಾರೀಖಿನೊಳಗೆ ಪಡಿತರ ಹಂಚಿಕೆ ನೀಡಬೇಕು : ಸ.ಪ.ವಿ.ಸಂ. ರಾಜ್ಯಾಧ್ಯಕ್ಷ ಟಿ.ಕೃಷ್ಣಪ್ಪ ಒತ್ತಾಯ

ಶಿವಮೊಗ್ಗ/ ಭದ್ರಾವತಿ: ನ್ಯಾಯಬೆಲೆ ಅಂಗಡಿಗಳಿಗೆ ಈ ಹಿಂದಿನ ಪದ್ಧತಿಯಂತೆ 5ನೇ ತಾರೀಖಿನೊಳಗೆ ಪಡಿತರ ಪದಾರ್ಥಗಳನ್ನು ಎತ್ತುವಳಿ ಮಾಡಿಸಿ ಕೂಡಲೇ ಪಡಿತರ ವಿತರಣೆಗೆ ಕ್ರಮವಹಿಸಬೇಕು ಹಾಗೂ ಕೂಡಲೇ ನ್ಯಾಯಬೆಲೆ ಅಂಗಡಿಗಳಿಗೆ ಪಡಿತರ ಹಂಚಿಕೆಯನ್ನು ವಿಳಂಬವಿಲ್ಲದೆ ನೀಡಬೇಕೆಂದು ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದ ರಾಜ್ಯಾಧ್ಯಕ್ಷ ಟಿ ಕೃಷ್ಣಪ್ಪ (ಕೆ.ಕೆ) ಒತ್ತಾಯಿಸಿದರು.

ಹಳೆನಗರದ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸ್ತುತ ಆಹಾರ ಭದ್ರತೆ ಯೋಜನೆಯಡಿ ಕೇಂದ್ರ ಸರ್ಕಾರದ 5 ಕೆ.ಜಿ. ಹಾಗೂ ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯಡಿ 5 ಕೆ.ಜಿ. ಅಕ್ಕಿಯನ್ನು ನೀಡಲಾಗುತ್ತಿದೆ. ಆದರೆ ಪಡಿತರ ದಾಸ್ತಾನು ವಿವಿಧ ಕಾರಣಗಳಿಂದ ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ದಿನಾಂಕ 15ನೇ ತಾರಿಖಿನಿಂದ ಎತ್ತುವಳಿ ನೀಡಲಾಗುತ್ತಿದೆ. ಇದರಿಂದಾಗಿ ಪಡಿತರ ಚೀಟಿದಾರರಿಗೆ ಪ್ರತಿ ತಿಂಗಳು 20ನೇ ತಾರೀಖಿನ ನಂತರ ಪಡಿತರ ವಿತರಣೆ ಮಾಡಲಾಗುತ್ತಿದೆ. ಇದರಿಂದಾಗಿ ಎತ್ತುವಳಿಗೂ ಸಹ ವಿಳಂಬವಾಗಿ ಪಡಿತರ ಚೀಟಿದಾರರು ನ್ಯಾಯಬೆಲೆ ಅಂಗಡಿ ಮುಂದೆ ಸರತಿ ಸಾಲಿನಲ್ಲಿ ನಿಲ್ಲುತ್ತಿದ್ದಾರೆ. ಆದ್ದರಿಂದ ನ್ಯಾಯಬೆಲೆ ಅಂಗಡಿಗಳಿಗೆ ಕಳೆದ ಈ ಹಿಂದಿನ ಪದ್ಧತಿಯಂತೆ 5ನೇ ತಾರೀಖಿನೊಳಗೆ ಪಡಿತರ ಪದಾರ್ಥಗಳನ್ನು ಎತ್ತುವಳಿ ಮಾಡಿಸಿ ಕೂಡಲೇ ಪಡಿತರ ವಿತರಣೆ ಕ್ರಮವಹಿಸಬೇಕು. ಕೂಡಲೇ ನ್ಯಾಯಬೆಲೆ ಅಂಗಡಿಗಳಿಗೆ ಪಡಿತರ ಹಂಚಿಕೆಯನ್ನು ವಿಳಂಬವಿಲ್ಲದೆ ನೀಡಬೇಕೆಂದು ಆಗ್ರಹಿಸಿದರು.

ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಬರಬೇಕಾದ ಕಮೀಷನ್ ಹಣವನ್ನು ಆಯಾ ತಿಂಗಳಲ್ಲೇ ಪಾವತಿಗೆ ಕ್ರಮವಹಿಸಬೇಕು ಮತ್ತು ಸುಮಾರು 7 ವರ್ಷಗಳಿಂದ ಇ.ಕೆ.ವೈ.ಸಿ. ಮಾಡಿರುವ ಹಣವು ಸಹ ಬಂದಿರುವುದಿಲ್ಲ. ಈ ಕೂಡಲೇ ಇ.ಕೆ.ವೈ.ಸಿ. ಹಣವನ್ನು ಬಿಡುಗಡೆ ಮಾಡಿಕೊಡಬೇಕು ಹಾಗೂ ಪ್ರಸ್ತುತ ನ್ಯಾಯಬೆಲೆ ಅಂಗಡಿಗಳಿಗೆ ಬಿಲ್ಲಿಂಗ್ ಮಾಡಿದ 24 ಗಂಟೆಗಳ ನಂತರ ಬಿಲ್ ಆಪ್‌ ಡೇಟ್ ಆಗುತ್ತಿದೆ. ಆದ್ದರಿಂದ ಕೂಡಲೇ ಈ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಿ ಬಿಲ್ ಹಾಕಿದ ಕೂಡಲೇ ವಿತರಣೆಗೆ ಅವಕಾಶ ಮಾಡಿಕೊಡಬೇಕು.

ಮಾರ್ಚ್‌ನಿಂದ ಜುಲೈವರೆಗೆ ಕೆಲವು ಜಿಲ್ಲೆಗಳಲ್ಲಿ ಅನ್ನಭಾಗ್ಯದ 5 ಕೆ.ಜಿ. ಕಮೀಷನ್ ಹಣ ಬಿಡುಗಡೆ ಮಾಡಿದ್ದಾರೆ. ಎನ್.ಎಫ್.ಎಸ್.ಐ. ಕಮೀಷನ್ ಹಣವನ್ನು ಏಪ್ರಿಲ್ ತಿಂಗಳು ಒಂದು ತಿಂಗಳು ಮಾತ್ರ ಬಿಡುಗಡೆಯಾಗಿದ್ದು ಮೇ-ಜೂನ್-ಜುಲೈ ಕಮೀಷನ್ ಹಣ ಬಿಡುಗಡೆಯಾಗಿಲ್ಲ. ಕೂಡಲೇ ಬಿಡುಗಡೆ ಮಾಡಬೇಕೆಂದು ಸಂಘದ ರಾಜ್ಯ
ಪ್ರಧಾನ ಕಾರ್ಯದರ್ಶಿ ಚನ್ನಕೇಶವೇಗೌಡ, ರಾಜ್ಯ ಸಂಘಟನಾ ಕಾರ್ಯದರ್ಶಿ ಸಿದ್ದಲಿಂಗಯ್ಯ ಸರ್ಕಾರಕ್ಕೆ ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಪಡಿತರ ವಿತರಕರ ಸಂಘದ ನಗರ ಅದ್ಯಕ್ಷ ನಾಗೇಶ್, ಪದಾಧಿಕಾರಿಗಳಾದ ರಾಜೇಂದ್ರ, ಕೃಷ್ಣೋಜಿ, ರಾಜೇಂದ್ರ, ಮಣಿ, ಸಚ್ಚಿದಾನಂದ ಮುಂತಾದವರು ಉಪಸ್ಥಿತರಿದ್ದರು.

ವರದಿ ಕೆ.ಆರ್. ಶಂಕರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!