ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರ್ನಾಟಕ ರಾಜ್ಯ ರೈತ ಸಂಘಟನೆಯಿಂದ ರಕ್ತದಾನ ಶಿಬಿರ

ಚಾಮರಾಜನಗರ/ ಹನೂರು :ತಾಲೂಕಿನ ಪುದುರಾಪುರ ಗ್ರಾಮದಲ್ಲಿ ಎರಡನೇ ವರ್ಷದ ರಕ್ತದಾನ ಶಿಬಿರ ಕಾರ್ಯಕ್ರಮಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆರೋಗ್ಯ ಅಧಿಕಾರಿ ಡಾ ಚಿದಂಬರಂ ಚಾಲನೆಯನ್ನು ನೀಡಿದರು.
ಕರ್ನಾಟಕ ರಾಜ್ಯ ರೈತ ಸಂಘಟನೆ ವತಿಯಿಂದ ಎರಡನೇ ವರ್ಷದ ರಕ್ತದಾನ ಶಿಬಿರ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮ ಕುರಿತು ಮಾತನಾಡಿದ ಆರೋಗ್ಯ ಅಧಿಕಾರಿ ಡಾ ಚಿದಂಬರಂ ರೈತರು ಕೃಷಿ ಮಾಡುವುದರ ಜೊತೆಗೆ ರಕ್ತದಾನವನ್ನು ಮಾಡುತ್ತಿರುವುದು ಶ್ಲಾಘನೀಯ ವಿಚಾರವಾಗಿದೆ. ಒಂದು ಬಾಟಲ್ ರಕ್ತದಿಂದ ಒಬ್ಬ ವ್ಯಕ್ತಿಯ ಜೀವವನ್ನು ಉಳಿಸುತ್ತದೆ. ಇಂತಹ ಕಾರ್ಯಕ್ರಮವನ್ನು ರೈತರು ಸ್ವಯಂ ಪ್ರೇರಣೆಯಿಂದ ಮುಂದಾಗಿರುವುದು ಸಂತೋಷದ ಸಂಗತಿಯಾಗಿದೆ ಎಂದು ತಿಳಿಸಿದರು.
ಕರ್ನಾಟಕ ರಾಜ್ಯ ರೈತ ಸಂಘದ ಈ ಕಾರ್ಯಕ್ರಮದಲ್ಲಿ 23 ರೈತರು ರಕ್ತದಾನವನ್ನು ಮಾಡಿದರು.
ಈ ಸಂದರ್ಭದಲ್ಲಿ ರಾಜ್ಯ ಸಮಿತಿಯ ಮಹೇಶ್ ಕುಮಾರ್, ಜಿಲ್ಲಾ ಸಮಿತಿಯಿಂದ ಉಪಾಧ್ಯಕ್ಷ ಗೌಡೇ ಗೌಡ ಹಾಗೂ ಜಿಲ್ಲಾ ಕಾರ್ಯದರ್ಶಿ ಮಹದೇವ ಪ್ರಸಾದ್, ಲೋಕೇಶ್ , ತಾಲೂಕು ಅಧ್ಯಕ್ಷ ಅಮ್ಜದ್ ಖಾನ್, ಮಹಿಳಾ ತಾಲೂಕು ಅಧ್ಯಕ್ಷ ರಾಜಮಣಿ, ಪಳನಿ ಸ್ವಾಮಿ ಸೇರಿದಂತೆ ಇನ್ನೂ ಮುಂತಾದವರು ಹಾಜರಿದ್ದರು.

ವರದಿ ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!