ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮಾಯೆಯ ಬೆನ್ನುಹತ್ತಿದರೆ ಬದುಕು ನರಕ: ಡಾ.ಕೊಕ್ಕನವರ

ಬಾಗಲಕೋಟೆ/ ಜಮಖಂಡಿ: ಕಣ್ಣಿಗೆ ಕಾಣುವುದು ನಿಜವಾದ ಜಗತ್ತಲ್ಲ. ಅದು ಮಾಯಾಲೋಕ ಒಳಗೆ ಆಳಕ್ಕಿಳಿದು ನೋಡಿದರೆ ಜಗತ್ತಿನ ನಿಜವಾದ ದರ್ಶನ ಆಗುತ್ತದೆ. ಹಾಗೆಯೇ ಮಾಯೆಯ ಬೆನ್ನುಹತ್ತಿ ನಿಜವಾದ ಬದುಕನ್ನು ನರಕ ಮಾಡಿಕೊಂಡು ಎಲ್ಲಿಯೂ ಸಲ್ಲದಂತಾಗಬಾರದು ಎಂದು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಧ್ಯಾಪಕ ಡಾ.ವೈ.ವೈ. ಕೊಕ್ಕನವರ ಹೇಳಿದರು.
ಶ್ರಾವಣ ಮಾಸದ ನಿಮಿತ್ತ ಓಲೆಮಠದ ಆಶ್ರಯದಲ್ಲಿ ಜರುಗುತ್ತಿರುವ ಓಣಿಗೊಂದು ದಿನ ವಚನ ಶ್ರಾವಣ ಅಂಗವಾಗಿ ಇಲ್ಲಿನ ನಂದಿಕೇಶ್ವರ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಸಂಜೆ ನಡೆದ ಹದಿನೈದನೆ ದಿನದ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಅವರು ‘ಇಲ್ಲಿ ಸಲ್ಲುವವರು ಅಲ್ಲಿಯೂ ಸಲ್ಲುತ್ತಾರೆ” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಮತ್ಸರ, ದ್ವೇಷ, ಆಕ್ರೋಶ, ಆಸೆ, ರೋಷಗಳನ್ನು ಅಳಿಯಬೇಕು. ಸಂಗ್ರಹ ಬುದ್ದಿಯನ್ನು ತ್ಯಜಿಸಬೇಕು. ಕಲುಷಿತ ಮನಸ್ಸುಗಳಿಗೆ ಸಾಂತ್ವನ ಹೇಳುವಂತ ಬಸವಾದಿ ಶಿವಶರಣರ ವಚನಗಳನ್ನು ಪಚನ ಮಾಡಿಕೊಂಡರೆ ಬದುಕು ಸುಂದರವಾಗಿ ಎಲ್ಲೆಡೆಯೂ, ಎಲ್ಲರಿಗೂ ಸಲ್ಲುವಂತಾಗಬಹುದು ಎಂದರು.
ಕಲ್ಯಾಣ ಮಠದ ಗೌರಿಶಂಕರ ಶಿವಾಚಾರ್ಯ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಿ ಮಾತನಾಡಿ, ಮನೆಗೆದ್ದು ಮಾರು ಗೆಲ್ಲಬೇಕು ಅದಕ್ಕಾಗಿ ಇಂದ್ರಿಯಗಳನ್ನು ನಿಯಂತ್ರಣದಲ್ಲಿ ಇಟ್ಟುಕೊಂಡು ಪ್ರೀತಿ, ವಿಶ್ವಾಸ, ಸೌಹಾರ್ದತೆಯಿಂದ ಬದುಕಬೇಕು. ಪ್ರಸಂಗ ಬಂದರೆ ಆತ್ಮಾರ್ಪಣ ಮಾಡಲು ಸಿದ್ಧರಿರಬೇಕು. ಸತ್ಕರ್ಮಗಳನ್ನು ಮಾಡಿ ಎಲ್ಲರೂ ನೆನಪಿಡುವಂತ ಸಾಧನೆ ಮಾಡಬೇಕು. ಅಂದಾಗ ಮಾತ್ರ ನಾವು ಎಲ್ಲಿಯೂ ಸಲ್ಲಲು ಸಾಧ್ಯವಾಗುತ್ತದೆ ಎಂದು ಆಶೀರ್ವಚನ ನೀಡಿದರು.
ಪರಮಾನಂದ ಚಿಗರಿ, ಡಾ.ವೈ.ವೈ. ಕೊಕ್ಕನವರ, ಗೌರಿಶಂಕರ ಶ್ರೀಗಳು ಭಾಗವಹಿಸಿದ್ದರು.
ಓಲೆಮಠದ ಆನಂದ ದೇವರು ಶ್ರೀಗಳು ಸಾನ್ನಿಧ್ಯ ವಹಿಸಿದ್ದರು. ಎಸ್.ವೈ. ಪಾಟೀಲ ಸ್ವಾಗತಿಸಿದರು. ಸುನಿತಾ ಜಂಬಗಿ ಹಾಗೂ ಸಂಗಡಿಗರು ಪ್ರಾರ್ಥನೆ ಗೀತೆ ಹಾಡಿದರು. ಸರಸ್ವತಿ ಸಬರದ(ಹೆಗಡಿ), ಗೋಪಾಲ ತುಳಜಾಪೂರ ಸಂಗೀತ ಸೇವೆ ಸಲ್ಲಿಸಿದರು. ಎಸ್.ಎಚ್. ಮಠಪತಿ ನಿರೂಪಿಸಿದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!