ದೂರುದಾರರಿಂದ ಹಣ ಸ್ವೀಕರಿಸಿದ ಆರೋಪಕ್ಕೆ ಸಂಬಂಧಿಸಿದಂತೆಯೇ ಇಬ್ಬರು ಪೊಲೀಸ್ರನ್ನು ಎಸ್ ಪಿ ಪ್ರಥ್ವಿಕ್ ಶಂಕರ್ ಅವರು ಸೇವೆಯಿಂದ ಅಮಾನತು ಗೊಳಿಸಿದ ಪ್ರಕರಣ ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ಜರುಗಿದೆ.
ಪೊಲೀಸ್ ಪೇದೆಗಳಾದ ವಿಶ್ವನಾಥರಡ್ಡಿ ಮತ್ತು ಗೋಪಾಲರೆಡ್ಡಿ ಎಂಬುವವರೇ ಅಮಾನತುಗೊಂಡಿದ್ದಾರೆ.
ಗುರುಮಠಕಲ್: ಜುಲೈ ತಿಂಗಳ 24 ರಂದು ಠಾಣಾ ವ್ಯಾಪ್ತಿಯ ಮಿನಾಸಪುರ ಗ್ರಾಮದ ವೆಂಕಟರೆಡ್ಡಿ ಮತ್ತು ಅವರ ಮಗ ಹಣಮಂತರಡ್ಡಿ ಎಂಬುವವರ ಮೇಲೆ ಯಾದಯ್ಯ ಯಾದವ್, ಮಲ್ಲಯ್ಯ ಯಾದವ್ ಮತ್ತು ಗೋಪಿ ಯಾದವ್ ಎಂಬುವವರು ಸೇರಿದಂತೆಯೇ ಐವರು ಮಾರಣಾಂತಿಕ ಹೊಡೆದು ಕೈ,ಕಾಲು ಮುರಿದಿದ್ದಾರೆ ಮತ್ತು ಜೀವ ತೆಗೆಯುವುದಾಗಿ ಬೆದರಿಕೆ ಹಾಕಿದ್ದಾರೆಂದು ಅನುಸೂಯಾ ವೆಂಟಕರಡ್ಡಿ ಎಂಬುವವರು ದೂರು ನೀಡಿದ್ದರು.
ಆರೋಪಿಗಳನ್ನು ಕುರಿತು ಬಂಧಿಸುವ ವಿಚಾರಿಸಿದಾಗ ಅವರನ್ನು ಬಂಧಿಸಬೇಕಾದರೆ ಒಂದು ಲಕ್ಷ ರೂ. ನೀಡಬೇಕೆಂಬ ಲಂಚದ ಬೇಡಿಕೆಯನ್ನು ಈ ಇಬ್ಬರು ಪೊಲೀಸರು ಇಟ್ಟಿದ್ದರು, ವಿಶ್ವನಾಥರಡ್ಡಿ ಎಂಬುವವರ ಮೊಬೈಲ್ಗೆ ಆಗ 10 ಸಾವಿರ ರೂ. ಹಾಗೂ ರಾಜೇಂದ್ರಬಾಬು ಎಂಬುವವರ ನಂಬರ್ಗೆ ಹತ್ತು ಸಾವಿರ ರೂ. ಪೊನ್ ಪೇ ಮಾಡಿದ್ದರ ಬಗ್ಗೆ ಎಸ್ ಪಿ ಅವರಿಗೆ ಸಲ್ಲಿಸಿದ್ದ ದೂರಿನಲ್ಲಿ ಅನುಸೂಯ ಎಂಬುವವರು ವಿವರಿಸಿದರು.
ಈ ದೂರಿನ್ವಯ ತನಿಖೆಗೆ ಆದೇಶಿಸಿದಾಗ ಇದನ್ನು ತನಿಖೆ ಮಾಡಿದ ಡಿವೈಎಸ್ ಪಿ ನಾಗರಾಜ ಅವರು ನೀಡಿದ ವರದಿ ಆಧಾರದ ಮೇಲೆ ಈ ಇಬ್ಬರನ್ನು ಎಸ್ ಪಿ ಅವರು ಸೇವೆಯಿಂದ ಅಮಾನತುಗೊಳಿಸಿದ್ದಾರೆ.
ವರದಿ: ಜಗದೀಶ್ ಕುಮಾರ್ ಭೂಮಾ



















