ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಒಳ ಮೀಸಲಾತಿ ಸಮೀಕ್ಷೆ ಮರು ಸಮೀಕ್ಷೆ ಮಾಡಲು ವೀರೇಶ ವಕೀಲರ ಆಗ್ರಹ

ಕೊಪ್ಪಳ/ಗಂಗಾವತಿ : ಒಳ ಮೀಸಲಾತಿ ಸಮೀಕ್ಷೆಯಲ್ಲಿ (ಬಲಗೈ ಸಮುದಾಯಕ್ಕೆ ಬಹಳ ಅನ್ಯಾಯವಾಗಿದೆ ಆದ್ದರಿಂದ ಈ ಒಳ ಮೀಸಲಾತಿ ಸಮೀಕ್ಷೆಯಲ್ಲಿ ತಾರತಮ್ಯ ಆಗಿರುವುದು ಮೇಲ್ನೋಟಕ್ಕೆ ಎದ್ದು ಕಾಣುತ್ತದೆ ಆದ್ದರಿಂದ ಕೂಡಲೆ ಒಳ ಮೀಸಲಾತಿ ಮೂರು ಸಮೀಕ್ಷೆ ಆಗಬೇಕೆಂದು ಸರ್ಕಾರಕ್ಕೆ ವೀರೇಶ ವಕೀಲರು ಈಳಿಗನೂರು ಒತ್ತಾಯಿಸಿದ್ದಾರೆ. ಅವರು ಪತ್ರಿಕೆ ಹೇಳಿಕೆ ನೀಡಿ ಮಾತನಾಡಿ. ನಮ್ಮ ಛಲವಾದಿ (ಬಲಗೈ) ಸಮಾಜದವರು ಯಾರ ಹಕ್ಕನ್ನು ಪ್ರಶ್ನಿಸದೇ, ವಿರೋಧ ಮಾಡದೇ ನಮ್ಮ ಹಕ್ಕಿಗಾಗಿ ನಾವು ಹೋರಾಟ ಮಾಡಲು ಸದಾ ಸಿದ್ದರಿದ್ದು, ನ್ಯಾಯಮೂರ್ತಿ ಹೆಚ್ ಎನ್ ನಾಗಮೋಹನದಾಸ್ ಅವರ ಅಧ್ಯಕ್ಷತೆಯ ಒಳ ಮೀಸಲಾತಿ ಏಕ ಸದಸ್ಯ ವಿಚಾರಣಾ ಆಯೋಗವು ದಿನಾಂಕ-04/08/2025 ರಂದು ಸರಕಾರಕ್ಕೆ ಒಳ ಮೀಸಲಾತಿ ವರದಿಯನ್ನು ಸಲ್ಲಿಸಿದ್ದು, 5 ಗುಂಪುಗಳನ್ನಾಗಿ ವಿಂಗಡಿಸಿ ಮೀಸಲಾತಿಯನ್ನು ಹಂಚಿಕೆ ಮಾಡಿದೆ ಇದರಲ್ಲಿ ಹೊಲೆಯ ಜಾತಿಗೆ ಸಂಬಂಧಿಸಿದ ಛಲವಾದಿ, ಪರಯ, ಪರೈಯಾನ್ ಹಾಗೂ ಬಲಗೈ ಜಾತಿಗೆ ಸೇರಿದ ಇನ್ನಿತರ ಜಾತಿಗಳನ್ನ ಒಟ್ಟಿಗೆ ಸೇರಿಸದೆ ಪ್ರತ್ಯೇಕವಾಗಿ ಮಾಡಿ ವರದಿಯನ್ನು ಸಲ್ಲಿಸಿದ್ದು, ಹೊಲೆಯ ಸಂಬಂಧಿತ ಜಾತಿಗಳನ್ನು ಕಡಿಮೆ ಮಾಡಿ ಬಲಗೈ ಸಮುದಾಯಕ್ಕೆ ನ್ಯಾಯಯುತವಾಗಿ ಸಿಗಬೇಕಾದ ಮೀಸಲಾತಿಯನ್ನು ಉದ್ದೇಶಪೂರ್ವಕವಾಗಿ ಕಡಿಮೆ ಮಾಡಿ ಕೇವಲ 5% ಮೀಸಲಾತಿಯನ್ನು ನೀಡಲು ಹೊರಟಿರುವುದು ಮತ್ತು ಬಲಗೈ ಸಮುದಾಯಕ್ಕೆ ಅನ್ಯಾಯವನ್ನು ಎಸಗುತ್ತಿರುವುದು ಮೇಲ್ನೋಟಕ್ಕೆ ಕಂಡು ಬಂದಿರುತ್ತದೆ ಆದ್ದರಿಂದ ಇದೇ ತಿಂಗಳ ದಿನಾಂಕ-16/08/2025 ರಂದು ನಡೆಯುವ ಸಚಿವ ಸಂಪುಟದಲ್ಲಿ ಮಾನ್ಯ ಮುಖ್ಯಮಂತ್ರಿಗಳು ಇದರ ಸರಿ ತಪ್ಪುಗಳ ಬಗ್ಗೆ ಸಂಪೂರ್ಣ ಚರ್ಚೆ ಮಾಡಬೇಕು ಮತ್ತು ರಾಜ್ಯದಲ್ಲಿ ಅತಿ ಹೆಚ್ಚು ಜನಸಂಖ್ಯೆಯಲ್ಲಿ ಇರುವ ಹೊಲೆಯ, ಛಲವಾದಿ, ಪರಯ, ಪರೈಯಾನ್ ಇನ್ನಿತರ ಬಲಗೈ ಸಂಬಂಧಿತ ಜಾತಿಗಳನ್ನು ಒಟ್ಟಿಗೆ ಸೇರಿಸಿ ಅಂಕಿ ಅಂಶಗಳನ್ನು ಬಿಡುಗಡೆ ಮಾಡಬೇಕು ಅಲ್ಲದೇ ನೂರಾರು ವರ್ಷಗಳ ಕಾಲ ಬಲಗೈ ಸಮುದಾಯವು ಅನುಭವಿಸಿಕೊಂಡು ಬಂದಿರುವ ಸಾಮಾಜಿಕ ಅನ್ಯಾಯ, ದೌರ್ಜನ್ಯ, ದಬ್ಬಾಳಿಕೆಗಳನ್ನ ನಿವಾರಿಸುವ ನಿಟ್ಟಿನಲ್ಲಿ ಮತ್ತು ಬಲಗೈ ಸಮುದಾಯವು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ರಾಜಕೀಯವಾಗಿ ಮುಂದುಬರಲು ಅನುವು ಮಾಡಿಕೊಡಬೇಕೆಂದು ಈ ಮೂಲಕ ಸರಕಾರಕ್ಕೆ ನಮ್ಮ ಹಕ್ಕೊತ್ತಾಯವಿರುತ್ತದೆ ಒಂದು ವೇಳೆ ಸರಕಾರವು ಇದಾವುದನ್ನೂ ಗಮನಕ್ಕೆ ತೆಗೆದುಕೊಳ್ಳದೆ ವರದಿಯನ್ನು ಯತಾವತ್ತಾಗಿ ಜಾರಿ ಮಾಡಲು ಮುಂದಾದರೆ ಮುಂದೆ ರಾಜ್ಯಾದ್ಯಂತ ಎಲ್ಲಾ ಜಿಲ್ಲೆ, ತಾಲೂಕುಗಳಲ್ಲಿ ಬೃಹತ್ ಹೋರಾಟವನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ಪತ್ರಿಕಾ ಪ್ರಕಟಣೆ ಮೂಲಕ ಬಲಗೈ ಸಮುದಾಯ ಎಚ್ಚರಿಸುತ್ತಿದ್ದೇವೆ ಎಂದು ಹೇಳಿದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!