ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿಷ್ಣುವರ್ಧನ್ ಸಮಾಧಿ ನೆಲಸಮ ರಾಘವೇಂದ್ರ ಪುಟ್ಟಿ ಖಂಡನೆ

ಬಳ್ಳಾರಿ / ಕಂಪ್ಲಿ : ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿದ್ದ ನಟ ದಿವಂಗತ ಡಾ. ವಿಷ್ಣುವರ್ಧನ್ ಅವರ ಸಮಾಧಿಯನ್ನು ರಾತ್ರೋರಾತ್ರಿ ನೆಲಸಮಗೊಳಿಸಿರುವುದು ತುಂಬಾ ನೋವಿನ ಸಂಗತಿಯಾಗಿದ್ದು ಪ್ರತಿಯೊಬ್ಬ ಕನ್ನಡಿಗರು ಖಂಡಿಸಬೇಕಾಗುತ್ತದೆ.

ರಾಜ್ಯದ ಚಿತ್ರ ರಂಗದ ಇತಿಹಾಸದಲ್ಲಿ ರಾಜಕುಮಾರ್, ವಿಷ್ಣುವರ್ಧನ್ ಅವರು ಜನಮಾನಸದಲ್ಲಿ ಸದಾ ಕಾಲಕ್ಕೂ ಉಳಿದಿರುವ ಮೇರು ನಟರು. ಇವರ ಆದರ್ಶಮಯ ಚಿತ್ರಗಳು ಎಲ್ಲಾ ಕಾಲಕ್ಕೂ ಮಾರ್ಗದರ್ಶಿಯಾಗಿವೆ. ಇಂತಹ ಮೇರು ನಟನ ಸಮಾಧಿಯನ್ನು ರಾತ್ರೋ ರಾತ್ರಿ ನೆಲಸಮ ಮಾಡಿರುವುದು ನಾಡಿನ ಜನರ ಭಾವನೆಯನ್ನು ಘಾಸಿಗೊಳಿಸಿದೆ. ರಾಜ್ಯ ಸರ್ಕಾರ ಸಮಾಧಿ ಸಮಸ್ಯೆಯನ್ನು ಇತ್ಯರ್ಥ ಪಡಿಸಬೇಕು ಎಂದು ಕರವೇ ( ನಾರಾಯಣಗೌಡ ಬಣ) ಕಂಪ್ಲಿ ತಾಲೂಕು ಯುವ ಘಟಕದ ಅಧ್ಯಕ್ಷ ರಾಘವೇಂದ್ರ ಪುಟ್ಟಿ ಆಗ್ರಹಿಸಿದರು.

10 ಗುಂಟೆ ಸಮಾಧಿಗಾಗಿ ಜಾಗವನ್ನು ಖರೀದಿ ಮಾಡಲು ಒಪ್ಪಿರುವ ನಟ ನಿರ್ದೇಶಕ ಸುದೀಪ ರವರಿಗೆ ನಮ್ಮ ಬೆಂಬಲ ಇದೆ ಎಂದು ಇದೆ ಸಂದರ್ಭದಲ್ಲಿ ಬೆಂಬಲ ವ್ಯಕ್ತಪಡಿಸಿದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!