ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಕ್ಕರೆ ನಾಡು ಮಂಡ್ಯದಲ್ಲಿ ಕೆ. ಆರ್. ಎಸ್. ಪಕ್ಷದ ಬೃಹತ್ ಸಮಾವೇಶ

ಕೆ ಆರ್ ಎಸ್ ಪಕ್ಷದ ಆರನೇ ವರ್ಷದ ಸಂಸ್ಥಾಪನಾ ದಿನಾಚರಣೆ ಮತ್ತು ಬೃಹತ್ ಸಮಾವೇಶ ಸರ್ಕಾರ ನಾಡು ಮಂಡ್ಯದ ಸಿಲ್ವರ್ ಜುಬಿಲಿ ಆವರಣದಲ್ಲಿ ಯಶಸ್ವಿಯಾಗಿ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೆಆರ್‌ಎಸ್ ಪಕ್ಷದ ನೂತನ ರಾಜ್ಯ ಗೌರವಾಧ್ಯಕ್ಷರಾದ ರವಿ ಕೃಷ್ಣಾರೆಡ್ಡಿ ಅವರು ರಾಜ್ಯದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, ಲೂಟಿಗಳಂತಹ ಅಕ್ರಮಗಳ ವಿರುದ್ಧ ಕೆ. ಆರ್‌. ಎಸ್‌. ಪಕ್ಷ ದಿನ ನಿತ್ಯ ಹೋರಾಟವನ್ನು ಮಾಡುತ್ತಿದ್ದು ರಾಜ್ಯದ ಲಕ್ಷಾಂತರ ಮಂದಿಯನ್ನು ಸೆಳೆಯುತ್ತಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ಲೂಟಿ ಅನ್ಯಾಯ ಅಕ್ರಮ ಮೋಸಗಳು ಎಗ್ಗಿಲ್ಲದೆ ನಡೆಯುತ್ತಿದ್ದು ಇವುಗಳ ವಿರುದ್ಧ ಹೋರಾಟ ಮಾಡುವ ಯಾವ ರಾಜಕೀಯ ಪಕ್ಷವು ಮುಂಚೂಣಿಯಲ್ಲಿಲ್ಲ ಆದರೆ ಕೆಆರ್‌ಎಸ್ ಪಕ್ಷವು ಭ್ರಷ್ಟಾಚಾರದ ವಿರುದ್ಧ ಹೋರಾಟಕ್ಕೆ ಇಳಿದು ಇಂದು ಆರು ವರ್ಷಗಳು ಕಳೆದಿದೆ, ಭ್ರಷ್ಟಾಚಾರದ ಪ್ರಕಾರಗಳನ್ನು ಪತ್ತೆ ಹಚ್ಚಿ ಸಮಾಜಕ್ಕೆ ತಲುಪಿಸಿ ಭ್ರಷ್ಟ ಅಧಿಕಾರಿಗಳನ್ನು ಲೂಟಿಕೋರರನ್ನು ವಂಶಪಾರಂಪರ್ಯದ ರಾಜಕಾರಣಿಗಳನ್ನು ಮನೆಗೆ ಕಳಿಸುವ ಕೆಲಸ ಕೆ. ಆರ್‌. ಎಸ್ ಪಕ್ಷವು ಮಾಡುತ್ತಿದೆ ಎಂದು ತಿಳಿಸಿದರು.

ಕೆ ಆರ್ ಎಸ್ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ದೀಪಕ್ ಸಿಎನ್ ರವರು ಪಕ್ಷದ ಜವಾಬ್ದಾರಿ ಮತ್ತು ನಾಳಿನ ಜನರ ಏಳಿಗೆಗಾಗಿ ಶ್ರಮವಹಿಸಿ ದುಡಿಯುತ್ತೇನೆ. ಕೆಆರ್‌ಎಸ್ ಪಕ್ಷವು ಮುಂದಿನ ಎಲ್ಲಾ ಹಂತಗಳ ಚುನಾವಣೆಗಳಲ್ಲಿ ಸ್ಪರ್ಧಿಸಿ ರಾಜ್ಯದ ಬಡವರ, ಹಿಂದುಳಿದವರ , ಕೃಷಿಕರ ,ಮಹಿಳೆಯರ ,ಯುವಕರ, ರೈತರ ಬೆನ್ನೆಲುಬಾಗಿ ಕೆಲಸ ಮಾಡಲಿದೆ ಎಂದು ತಿಳಿಸಿದರು. ನೂತನ ಕಾರ್ಯಾಧ್ಯಕ್ಷರಾಗಿ ನೇಮಕವಾದ ರಘು ಜಾಣಗೆರೆ, ನೂತನ ರಾಜ್ಯ ಪ್ರಧಾನ ಕಾರ್ಯದರ್ಶಿ ರಘುಪತಿ ಭಟ್, ನೂತನ ಜಂಟಿ ಕಾರ್ಯದರ್ಶಿ, ಜೀವನ್, ಉಪಾಧ್ಯಕ್ಷರಾದ ಸೋಮ ಸುಂದರ, ಮಂಜುನಾಥ್ ಸೇರಿದಂತೆ ರಾಜ್ಯ ಸಮಿತಿಯ ಎಲ್ಲಾ ಪದಾಧಿಕಾರಿಗಳು ವಿವಿಧ ಜಿಲ್ಲೆಗಳಿಂದ ಆಗಮಿಸಿದ ಪಕ್ಷದ ಸಾವಿರಾರು ಸೈನಿಕರು ಸೇರಿದ್ದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!