ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಯುವಕರು ಗ್ರಂಥಾಲಯಕ್ಕೆ ಬಂದು ಪುಸ್ತಕಗಳನ್ನು ಓದಬೇಕು : ಎ. ಅಬ್ದುಲ್ ಮಾಲಿಕ್

ಚಾಮರಾಜನಗರ : ಗುಂಡ್ಲುಪೇಟೆ ಪಟ್ಟಣದ ಸಾರ್ವಜನಿಕ ಗ್ರಂಥಾಲಯದಲ್ಲಿ ಗ್ರಂಥಾಲಯಗಳ ಪಿತಾಮಹ ಎಸ್.ಆರ್.ರಂಗನಾಥ್ ರವರ ಜನ್ಮದಿನದ ಪ್ರಯುಕ್ತ ಗ್ರಂಥಪಾಲಕರ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಮಾತನಾಡಿದ ಗ್ರಂಥಪಾಲಕರಾದ ಸಿ.ಜಯಸ್ವಾಮಿರವರು ಸಾರ್ವಜನಿಕರು ಮತ್ತು ವಿದ್ಯಾವಂತರು ಹೆಚ್ಚು ಪುಸ್ತಕಗಳು ಹಾಗೂ ದಿನ ಪತ್ರಿಕೆಗಳನ್ನು ಗ್ರಂಥಾಲಯಕ್ಕೆ ಬಂದು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕೆಂದು ಮನವಿ ಮಾಡಿದರು.
ಇದೇ ವೇಳೆ ಕರ್ನಾಟಕ ಕಾವಲು ಪಡೆಯ ತಾಲ್ಲೂಕು ಅಧ್ಯಕ್ಷರಾದ ಎ. ಅಬ್ದುಲ್ ಮಾಲಿಕ್ ಮಾತನಾಡಿ ಗ್ರಂಥಾಲಯ ಪಾಲಕರ ದಿನಾಚರಣೆ ಪ್ರಯುಕ್ತ ಇಂದಿನ ಯುವಕರು ಮೊಬೈಲ್ ಹೆಚ್ಚು ಬಳಸುವುದನ್ನು ಬಿಟ್ಟು ಗ್ರಂಥಾಲಯಕ್ಕೆ ಬಂದು ಪುಸ್ತಕಗಳನ್ನು ಓದಬೇಕೆಂದರು. ಇದೇ ವೇಳೆ ಗ್ರಂಥಾಲಯ ಸಿಬ್ಬಂದಿಯವರಾದ ಕುಮಾರಿ ಸಿಂಧು, ವಕೀಲರಾದ ಕಾಳಸ್ವಾಮಿ,ಮಹೇಂದ್ರ, ಶಂಕರ್, ಮಿಮಿಕ್ರಿರಾಜು ಸೇರಿದಂತೆ ಪುಸ್ತಕ ಪ್ರಿಯರು ಹಾಜರಿದ್ದರು.

ವರದಿ ಗುಂಡ್ಲುಪೇಟೆ ಕುಮಾರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!