ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ತೀರ್ಥಹಳ್ಳಿ ಲಯನ್ಸ್ ಅಧ್ಯಕ್ಷರಾಗಿ ಶ್ರೀಕಾಂತ್ ಭಟ್

ಶಿವಮೊಗ್ಗ/ ತೀರ್ಥಹಳ್ಳಿ :ಮಾದವ ಮಂಗಳ ಸಭಾಂಗಣದಲ್ಲಿ ನೆಡೆದ ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಎಲ್ ಎಸ್ ಶ್ರೀಕಾಂತ್ ಭಟ್ , ಕಾರ್ಯದರ್ಶಿಯಾಗಿ ಜಿ ಲಿಂಗರಾಜು ಹಾಗೂ ಖಜಾಂಚಿಯಾಗಿ ಲ ಪ್ರಶಾಂತ್ ಹೆಗ್ಗರ್ ರವರು ಪದಗ್ರಹಣ ಮಾಡಿದರು. ಜಿಲ್ಲಾ ಉಪ ಗವರ್ನರ್ ಹರಿಪ್ರಸಾದ್ ರೈ ರವರು ಪದಗ್ರಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ ಈ ವರ್ಷ ಅಂತರಾಷ್ಟ್ರೀಯ ಮುಖ್ಯಸ್ಥರು ಭಾರತ ದೇಶದವರಾದ ಎ ಪಿ ಸಿಂಗರವರು ಎಂದು ಹೇಳಲು ನಮಗೆಲ್ಲ ಹೆಮ್ಮೆ ಎಂದರು.
ಪದಗ್ರಹಣ ಸ್ವೀಕರಿಸಿ ಮಾತನಾಡಿದ ನೂತನ ಅಧ್ಯಕ್ಷರಾದ ಶ್ರೀಕಾಂತ್ ಭಟ್ ರವರು ನಾನು ಮಾತಿಗಿಂತ ಕೃತಿ ಮೂಲಕ ಗುರುತಿಸಿ ಕೊಳ್ಳಬೇಕೆಂದಿರುವೆ ಎಂದು ಹೇಳಿದರು. ನಿರ್ಗಮನ ಅಧ್ಯಕ್ಷರು ಎನ್ ಎಸ್ ಮುರುಳಿ ಕಳೆದ ಒಂದು ವರ್ಷದ ಅವಧಿಯಲ್ಲಿ ಅನೇಕ ಸಮಾಜ ಮುಖಿ ಕಾರ್ಯಕ್ರಮ ಮಾಡಿದ್ದ ತೃಪ್ತಿ ಇದ್ದು ತಮಗೆ ಸಹಕರಿಸಿದವರಿಗೆಲ್ಲಾ ಕೃತಜ್ಞತೆ ಸಲ್ಲಿಸಿದರು. ನಿರ್ಗಮಿಸಿದ ಎಲ್ಲಾ ಪದಾಧಿಕಾರಿಗಳು ಹಾಲಿ ಅಧ್ಯಕ್ಷರಿಗೆ ಹಾಗೂ ಎಲ್ಲಾ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.

ವರದಿ :ಪ್ರಸಾದ್ ಹೆಚ್ ಬಿ, ತೀರ್ಥಹಳ್ಳಿ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!