ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಕಲಾಕುಂಚದಿಂದ‌ ಮಹಾಶಿವರಾತ್ರಿ ಪ್ರಯುಕ್ತ ರಾಜ್ಯ ಮಟ್ಟದ ಉಚಿತ ಚಿತ್ರ ಬರೆಯುವ “ಅಂಚೆ-ಕುಂಚ”
ಸ್ಪರ್ಧೆ

ದಾವಣಗೆರೆ:-ಜ.27. ನಗರದ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಆಶ್ರಯದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ೫೦ ಪೈಸೆ ಅಂಚೆ ಕಾರ್ಡಿನಲ್ಲಿ ರಾಜ್ಯ ಮಟ್ಟದ ಉಚಿತ ಚಿತ್ರ ಬರೆಯುವ “ಅಂಚೆ-ಕುಂಚ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷರಾದ ಕೆ.ಹೆಚ್. ಮಂಜುನಾಥ್ ತಿಳಿಸಿದ್ದಾರೆ. ಆಸಕ್ತರು ಯಾವುದೇ ವಯೋಮಾನದ ಮಿತಿ ಇಲ್ಲದೇ ಯಾವುದೇ ಕಲಾಪ್ರಕಾರಗಳಲ್ಲಿ ಎಷ್ಟಾದರೂ ಶಿವನ ಚಿತ್ರ ಬರೆದು ಈ ಕೆಳಗಿನ ವಿಳಾಸಕ್ಕೆ ೧೫-೨-೨೦೨೩ರೊಳಗೆ ತಲಪುವಂತೆ ಸ್ಪರ್ಧಿಗಳು ಕನ್ನಡದಲ್ಲಿ ತಮ್ಮ ಹೆಸರು, ವಿಳಾಸ ವಯಸ್ಸು, ವ್ಯಾಟ್ಸಪ್ ಸಂಖ್ಯೆ ಕಳಿಸಬೇಕು ಎಂದು ಕಲಾಕುಂಚ ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ. ವಯೋಮಾನಕ್ಕೆ ಅನುಗುಣವಾಗಿ ವಿವಿಧ ವಿಭಾಗಗಳಾಗಿ ವಿಂಗಡಿಸಿ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಮಾತ್ರ ಅವರು ಕೊಟ್ಟ ವ್ಯಾಟ್ಸಪ್ ಸಂಖ್ಯೆಗೆ ಸ್ಪರ್ಧೆಯ ನಂತರ ಫಲಿತಾಂಶ ಮತ್ತು ಅಭಿನಂದನಾ ಪತ್ರ ಕಳಿಸಲಾಗುವುದು. ಚಿತ್ರ ಬರೆದು ಅಂಚೆ ಕಾರ್ಡ್ ಕಳಿಸುವ ವಿಳಾಸ # ೪೩೧, `ಕನ್ನಡ ಕೃಪಾ’ ಕುವೆಂಪು ರಸ್ತೆ, ಕಸ್ತೂರ್ಬಾ ಬಡಾವಣೆ, ದಾವಣಗೆರೆ- ೫೭೭ ೦೦೨., ಮೊ. ೯೫೩೮೭೩೨೭೭೭ ಈ ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಕಲಾಕುಂಚದ ಪ್ರಧಾನ ಕಾರ್ಯದರ್ಶಿ ಮಹದೇವ ಅಸಗೋಡು ತಿಳಿಸಿದ್ದಾರೆ.

ವರದಿ: ಬಿ. ಎಸ್. ಬಾಗೇವಾಡಿಮಠ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

6 Responses

  1. Iam so interest in drawing we have to draw the pictures I am so interested but iam so want to draw lovely drawing fou euthanasia wicks y oi test the h to do a bad news that was supposed a great day in our hearts you can get your hands out and it you cancel all up and down in your eyes that thee the same day as he went back on and that we were doing in our way the system of natural law is more efficient way or of our rights in terms or the skills we want

  2. ಒಳ್ಳೆಯ ವಿಚಾರಕ್ಕೆ ಆದ್ಯತೆ ಇದ್ದೆ ಇರುತ್ತದೆ,
    ಈ ಒಂದು ಸ್ಪರ್ಧೆಯು ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಮಾರ್ಗವು ಆಗಿದೆ,,,

Leave a Reply

Your email address will not be published. Required fields are marked *

ಇದನ್ನೂ ಓದಿ