ಬೆಂಗಳೂರು :ಅಟಲ್ ಜೀ ಜನ್ಮ ಶತಮಾನೋತ್ಸವ ಸಮಿತಿ – ಕರ್ನಾಟಕ ವತಿಯಿಂದ ಅಟಲ್ ಜೀ ಜನ್ಮಶತಮಾನೋತ್ಸವದ ಅಂಗವಾಗಿ ಇಂದು ಬೆಂಗಳೂರಿನ ಟೌನ್ಹಾಲ್ನಲ್ಲಿ ಏರ್ಪಡಿಸಲಾದ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಬಿ.ಎಲ್. ಸಂತೋಷ್, ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಡಿ. ವಿ. ಸದಾನಂದ ಗೌಡ, ಪ್ರತಿಪಕ್ಷ ನಾಯಕರಾದ ಶ್ರೀ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ ಅವರು ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಮಾನೋತ್ಸವ ಸ್ಮರಣ ಸಂಚಿಕೆಯನ್ನು ಲೋಕಾರ್ಪಣೆಗೊಳಿಸಿದರು.
ಈ ಸಂದರ್ಭದಲ್ಲಿ ಶಾಸಕರುಗಳು, ವಿಧಾನಪರಿಷತ್ ಸದಸ್ಯರುಗಳು, ಅಟಲ್ ಜೀ ಜನ್ಮ ಶತಮಾನೋತ್ಸವ ಸಮಿತಿಯ ಸದಸ್ಯರುಗಳು, ಬಿಜೆಪಿ ಪದಾಧಿಕಾರಿಗಳು, ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ: ಕೊಡಕ್ಕಲ್ ಶಿವಪ್ರಸಾದ್



















